ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ @siddaramaiah ನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ.
ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ.
ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ @siddaramaiah ನವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳು.
1.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?
2.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?
3.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?
5.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?
6.) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?
7.) ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?
8.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?
9.) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?
ನಾಳೆ, ಜನವರಿ 16ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮಾನ್ಯ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿಕೊಂಡು ಕರ್ನಾಟಕದ ಜನತೆಗೆ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




