ಹಾಸನ: ಸಿಎಂ ಸಿದ್ದರಾಮಯ್ಯ ಹಾಸನಕ್ಕೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದ ನಂತರ ಡಬಲ್ ಡೆಕ್ಕರ್ ಬಸ್ಸಿನಲ್ಲಿ ಪ್ರಯಾಣಿಸಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ಮುಖ್ಯ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಣೆ ಮಾಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಲೋಕಸಭಾ ಸದಸ್ಯರಾ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಮತ್ತಿತರರು ಸಿದ್ದರಾಮಯ್ಯ ಅವರೊಂದಿಗೆ ಬಸ್ಸಿನಲ್ಲಿ ಪ್ರಯಾಣಿಸಿ ದೀಪಾಲಂಕಾರ ವೀಕ್ಷಣೆಗೆ ಸಾಥ್ ನೀಡಿದರು.




