ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅಕ್ರಮದ್ದೇ ದೊಡ್ಡ ಸದ್ದು. ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಎಲ್ಲೆಡೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲಿಯೂ ಅಕ್ರಮ ನಡೆಯದಂತೆ ತೀವ್ರ ನಿಗಾ ವಹಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಹೆದ್ದಾರಿಯಲ್ಲಿ ಸಾಗುವ ಎಲ್ಲಾ ಅನುಮಾನಾಸ್ಪದ ವಾಹನಗಳನ್ನು ತಡೆದು ಕೂಲಂಕುಶವಾಗಿ ತಪಾಸಣೆ ನಡೆಸಿದ ನಂತರವೇ ಅವುಗಳನ್ನು ಮುಂದೆ ಸಾಗಲು ಬಿಡುತ್ತಿದ್ದಾರೆ. ಇಂತಹ ತಪಾಸಣೆಯ ಬಿಸಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಟ್ಟಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಪ್ರಚಾರಕ್ಕೆ ಹೈಟೆಕ್ ಬಸ್ಸಿನಲ್ಲಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರಿದ್ದ ವಾಹನವನ್ನು ಹೆದ್ದಾರಿಯ ಚೆಕ್ ಪೋಸ್ಟ್ ಬಳಿ ಬಸ್ಸನ್ನು ತಡೆದ ಚುನಾವಣಾ ವೀಕ್ಷಕರು ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಸಂಪೂರ್ಣ ತಪಾಸಣೆ ನಡೆಸಿದರು.
ಈ ವೇಳೆ ಸಿದ್ದರಾಮಯ್ಯ ಬಸ್ ಒಳಗೇ ಕುಳಿತಿದ್ದು ತಪಾಸಣೆಗೆ ಸಹಕಾರ ನೀಡಿದರು. ಸಾರ್ವಜನಿಕರು ಮುಖ್ಯಮಂತ್ರಿಯವರನ್ನು ಕುತೂಹಲದಿಂದ ವೀಕ್ಷಿಸಿ, ಫೋಟೊ ತೆಗೆದುಕೊಂಡರು.
ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಸಿದ್ದರಾಮಯ್ಯ ಅವರಿಗಾಗಿ ವಿಶೇಷವಾಗಿ ವಿನ್ಯಾಸ ಮಾಡಿರುವ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್‍ನಲ್ಲಿ ಪ್ರಯಾಣ ಮಾಡುತ್ತಾರೆ. ಇದೇ ಬಸ್ಸನ್ನು ತಡೆದ ಚುನಾವಣಾ ಅಧಿಕಾರಿಗಳು ಅದನ್ನು ತಪಾಸಣೆಗೊಳಪಡಿಸಿದರು.
ನಂತರ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು. ರೋಡ್‍ಶೋನಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.




