ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೊಂದು ಪ್ರಕರಣದಲ್ಲಿ ಕಾನೂನಿನ ಕುಣಿಕೆಯೊಳಗೆ ಸಿಲುಕಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯಲ್ಲಿ ಲೋಕಾಯುಕ್ತ ಎಡಿಜಿಪಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕೂಡಲೇ ಶೋಕಾಸ್ ನೋಟೀಸ್ ಜಾರಿ ಮಾಡಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ಅವರು ಖುದ್ದು ಹಾಜಾರಾಗಲು ಸೂಚಿಸಬೇಕು ಎಂದು ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಅತ್ಯಂತ ಆಪ್ತ ಸ್ನೇಹಿತ ಕಿಂಗ್ಸ್ ಕೋರ್ಟ್ ವಿವೇಕ್ ಅವರನ್ನು ಟರ್ಫ್ ಕ್ಲಬ್ ನ ಸ್ಟಿವರ್ಡ್ ಹುದ್ದೆಗೆ ನೇಮಿಸಲಾಗಿದೆ. ಇದಕ್ಕಾಗಿ ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿಗಳನ್ನು ಚೆಕ್ ರೂಪದಲ್ಲಿ ಪಡೆದು ಟರ್ಫ್ ಕ್ಲಬ್‌ನ ಅತ್ಯಂತ ಆಯಕಟ್ಟಿನ ಹುದ್ದೆಗೆ ನಿಯೋಜಿಸಲಾಗಿದೆ. ಈ ಮೂಲಕ ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಎನ್ ಆರ್ ರಮೇಶ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಇದನ್ನು ಪ್ರಶ್ನಿಸಿ ರಮೇಶ್ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯ ಪೀಠ, ಸದರಿ ಪ್ರಕರಣದ ತನಿಖೆಯನ್ನು ಮೊದಲಿನಿಂದ ಹೊಸದಾಗಿ ಪ್ರಾರಂಭಿಸಿ ಆರು ತಿಂಗಳ ಒಳಗಾಗಿ ಸಮರ್ಪಕವಾದ ಹೊಸ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕಳೆದ ಫೆಬ್ರವರಿಯಲ್ಲಿ ಆದೇಶ ನೀಡಿತ್ತು.
ಆದರೆ ಈ ಅವಧಿಯೊಳಗೆ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಲು ವಿಫಲರಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಲೋಕಾಯುಕ್ತ ಪೊಲೀಸ್ ನಡೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.




