ಬೆಂಗಳೂರು: ಮಾರ್ಚ್ 3 ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದೆ. ಈ ಮೂಲಕ ಹೊಸ ದಾಖಲೆ ನಿರ್ಮಾಣವಾದರೆ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಸಿದ್ದರಾಮಯ್ಯ ಅವರ ಪಾಲಾಗಲಿದೆ. ಕಾಲು ನೋವಿನ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಮನೆಯಲ್ಲಿಯೇ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
ವಿವಿಧ ರೈತ ಸಂಘಟನೆಗಳ ಪ್ರಮುಖರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುವುದು ಎಂದರು.
ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಅವರ ಭಾಷಣದ ಮೇಲೆ ಚರ್ಚೆ ಇರುತ್ತದೆ. ಎಷ್ಟು ದಿನ ಅಧಿವೇಶನ ನಡೆಸಬೇಕು ಅನ್ನೋದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದರು.
ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಇಲಾಖೆಗಳ ಸಭೆ ನಡೆಸಿದ್ದೇನೆ. ಇಂದು ರೈತ ಮುಖಂಡರ ಸಭೆ ಮಾಡಿದ್ದೇನೆ. ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ ಎಂದರು.
ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.




