ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸೊಕ್ಕು ಮುರಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಹಲವು ಮಂತ್ರಿಗಳ ಬೇಡಿಕೆಯ ಹಿಂದೆ ಮುಖ್ಯಮಂತ್ರಿಗಳ ಪಾತ್ರವಿದೆ ಎಂದರು.
ರಾಜ್ಯ ಕಾಂಗ್ರೆಸ್ ಶಿವಕುಮಾರ್ ವಿರುದ್ಧ ಆಡಳಿತ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಒಂದು ಬಣ ಅವರ ರಾಜಕೀಯ ಏಳಿಗೆಯನ್ನು ಸಹಿಸಿಕೊಳ್ಳುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹಾಕಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿಕೊಳ್ಳಬಹುದು ಎಂದರು.
ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಕಟ್ಟಿಹಾಕಲು ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಇದರ ಭಾಗ. ಇದರಲ್ಲಿ ಸಿದ್ದರಾಮಯ್ಯ ಮತ್ತು ಅವರ ಬಣದ ಸಚಿವರು ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದರು.




