ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಕ್ರಮ ಸಿಎಂ ಸಿದ್ದರಾಮಯ್ಯ ಅವರ ಯೂ ಟರ್ನ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಮಾತ್ರವಲ್ಲ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಈ 14 ಸೈಟ್ ಕಥೆ ಒಂದಾದರೆ ಇದು ಅದಕ್ಕಿಂತ ಹಳೆ ನಿವೇಶನದ ಕತೆ ಒಂದಿದೆ. ಆ ಪ್ರಕರಣ ಕುತ್ತಿಗೆಗೆ ಬಂದಾಗ ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಅದನ್ನು ಮಾರಾಟ ಮಾಡಲಾಯಿತು ಎಂದು ಕಥೆ ಕಟ್ಟಿದ್ದರಲ್ಲ, ಆ ನಿವೇಶನ ಎಲ್ಲಿಂದ ಬಂದಿತ್ತು ಸ್ವಲ್ಪ ಹೇಳುವಿರಾ ಎಂದು ಪ್ರಶ್ನಿಸಿದರು.
ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ. ಇದರಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಹೋದರು. ಅಲ್ಲಿ ಅವರ ಪರ ತೀರ್ಪು ಬಂತು. ಇದು 14 ಸೈಟ್ಗಿಂತ ದೊಡ್ಡ ಹಗರಣ ಎಂದರು.
ಈ ನಿವೇಶನದಿಂದ ದೊಡ್ಡ ಸಮಸ್ಯೆ ಬಂದಿದ್ದಕ್ಕೆ ಚುನಾವಣಾ ಖರ್ಚಿನ ಹೆಸರಿನಲ್ಲಿ ಮಾರಾಟ ಮಾಡಿದರು. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು ಎಂದರೆ ಇದೇ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಹೊರಟರು ಎಂದರು.
ಮೈಸೂರಿನಲ್ಲಿ ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲ ಎನ್ನುತ್ತಾರೆ ಅವರ ಶ್ರೀಮತಿಯವರು. ಈ ಹಿಂದೆ ಏನೆಲ್ಲ ಮಾಡಿದ್ದಾರೆ, ವೈಟ್ನರ್ ಹಾಕಿ ಎಲ್ಲ ಮುಗಿದೋಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ ಎಂದರು.
ಊರಿಗೆ ಬುದ್ದಿ ಹೇಳೊರು ಇಲ್ಲಿ ಏನೇನು ಮಾಡಿದ್ದೀರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ ಎಂದರು.



