ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯ ಮಾಡಿರುವ ಅವರು “ಉಪ್ಪು ತಿಂದವರು ನೀರು ಕುಡಿಯಲಿ”ಈ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಅಮ್ರಿತ ಪೌಲ್ ಸೇರಿ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಮತ್ತು ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದಿಂದ್ದಾರೆ.




