ಬೆಂಗಳೂರು: ಹಾಲು ಮಾರಾಟ ದರ, ಡೀಸೆಲ್ ಬೆಲೆ ಸೇರಿದಂತೆ ರಾಜ್ಯ ಸರ್ಕಾರ ಮಾಡಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರ್ಧಾರ ವಾಪಾಸ್ ಪಡೆಯುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಇಂದು ಮೆರವಣಿಗೆಯಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟರು.
ಮಾರ್ಗ ಮಧ್ಯೆ ಇವರನ್ನು ತಡೆದ ಪೊಲೀಸರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ವಿಧಾನ ಮಂಡಲದ ಉಭಯ ಸದನಗಳ ವಿಪಕ್ಷ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಖಂಡರಾದ ಸಿ ಟಿ ರವಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಜನ ವಿರೋಧಿಯಾಗಿ ಮಾಡಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರ್ಧಾರವನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದರು.
ನೆನ್ನೆಯಿಂದ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನು ಈಗ ಅಂತ್ಯಗೊಳಿಸಲಾಗುತ್ತಿದೆ. ಏಪ್ರಿಲ್ 7ರ ನಂತರ ಮತ್ತೊಂದು ಸುತ್ತಿನ ಹೋರಾಟ ಆರಂಭಿಸಲಾಗುವುದು. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಧರಣಿ ಮತ್ತು ರಸ್ತೆ ತಡೆ ನಡೆಸಿ ಬೆಲೆ ಏರಿಕೆ ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಲಿದ್ದಾರೆ ಎಂದರು.
ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ. ಇದು ಜೇಬುಗಳ್ಳರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ತೆರಿಗೆ ಹೆಚ್ಚಳದ ಮೂಲಕ ಕಳ್ಳತನ ಮಾಡಿದರೆ ಡಿಸಿಎಂ ಡಿ ಕೆ ಶಿವಕುಮಾರ್ ಕಮಿಷನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದರು.
ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ, ಪತ್ನಿಗೆ ಸಹಾಯಧನ ನೀಡಿ, ಪತಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದರು.




