ಬೆಂಗಳೂರು: ಉದ್ಯಾನ ನಗರಿ ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂಬ ವಿಶೇಷಣಗಳಿಂದ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಗಬ್ಬೆದ್ದು ನಾರತೊಡಗಿದೆ. ಬೆಂಗಳೂರಿನ ಕೇಂದ್ರ ಭಾಗ ಮೆಜೆಸ್ಟಿಕ್, ಶಿವಾಜಿನಗರ, ಮಲ್ಲೇಶ್ವರಂ, ಜಯನಗರ, ಚಾಮರಾಜಪೇಟೆ, ಕೆ ಆರ್ ಮಾರುಕಟ್ಟೆ ಸೇರಿದಂತೆ ಬಹುತೇಕ ನಗರದ ಎಲ್ಲ ಪ್ರದೇಶಗಳಲ್ಲಿ ರಾಶಿರಾಶಿ ಕಸ ಬಿದ್ದು ಕೊಳೆತು ನಾಗರಿಕರು ಮೂಗುಮುಚ್ಚಿಕೊಂಡು ತಿರುಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ನಗರದಲ್ಲಿ ಕಳೆದ 1 ವಾರದಿಂದ ಮಳೆ ಅಬ್ಬರಿಸಿ ಭೋರ್ಗರೆಯುತ್ತಿದೆ. ಅದು ಕೂಡ ಬೆಳಗಿನ ಜಾವ ಧಾರಾಕಾರವಾಗಿ ಸುರಿಯುತ್ತಿದೆ. ಇದರ ಪರಿಣಾಮ ಪೌರಕಾರ್ಮಿಕರು ತಮ್ಮ ಕೆಲಸಕ್ಕೆ ಸಕಾಲದಲ್ಲಿ ಬರಲು ಸಾಧ್ಯವಾಗುತ್ತಿಲ್ಲ.
ಮಧ್ಯಾಹ್ನದ ವೇಳೆಗೆ ಮಳೆ ನಿಂತ ಮೇಲೆ ಬರುವ ಪೌರಕಾರ್ಮಿಕರು ಸಂಗ್ರಹವಾಗುವ ಎಲ್ಲ ಕಸವನ್ನು ಒಂದೆಡೆ ಸೇರಿಸಿ ಗುಡ್ಡೆ ಹಾಕುತ್ತಿದ್ದಾರೆ. ಇದನ್ನು ತೆಗೆದುಕೊಂಡು ಹೋಗುವ ಲಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ.
ಕಸ ವಿಲೇವಾರಿಗಾಗಿ ನಿಗದಿಪಡಿಸಿರುವ ತ್ಯಾಜ್ಯ ಸಂಗ್ರಹಣ ಕೇಂದ್ರಗಳಿಗೆ ತೆರಳುವ ದಾರಿ ಭಾರಿ ಮಳೆಯ ಕಾರಣಕ್ಕೆ ಕೊಚ್ಚಿ ಹೋಗಿದೆ. ಈ ಪ್ರದೇಶ ತಲುಪಲು ಸಾಧ್ಯವಾಗದೆ ಕಸ ತುಂಬಿದ ಲಾರಿಗಳು ಎಲ್ಲಂದರೆ ಅಲ್ಲೇ ನಿಂತಿವೆ. ಹೀಗಾಗಿ ನಗರದಲ್ಲಿ ಸಂಗ್ರಹವಾಗಿರುವ ಕಸವನ್ನು ತುಂಬಿಕೊಂಡು ಹೋಗಲು ಲಾರಿಗಳು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕಾರಣದಿಂದ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಕಸ ರಾಶಿಯಾಗಿ ಗುಡ್ಡೆಯಂತೆ ಬಿದ್ದಿದೆ. ಮಳೆಯ ಕಾರಣಕ್ಕಾಗಿ ಕಸ ಕೊಳೆಯತೊಡಗಿದ್ದು ಸುತ್ತಮುತ್ತಲಿನ ಪ್ರದೇಶ ದುರ್ವಾಸನೆಯಿಂದ ತುಂಬಿದೆ. ಹೀಗಾಗಿ ಬೆಂಗಳೂರು ಗಬ್ಬೆದ್ದು ನಾರುತ್ತಿದೆ.
ಕಸ ತೆಗೆಯುವಂತೆ ಸಾರ್ವಜನಿಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಕಾಲ್ ಸೆಂಟರ್ ಗೆ ಹಲವಾರು ಕರೆಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ. ಆದರೆ ಕಸ ವಿಲೇವಾರಿ ಮಾಡುವ ಲಾರಿಗಳು ಬಾರದ ಕಾರಣ ಮಹಾನಗರ ಪಾಲಿಕೆ ಕೂಡ ಏನು ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ.




