ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ವಿಶ್ವಮಾನವ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಶೋಕಾಚರಣೆ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಶಾಲಾ ಶಿಕ್ಷಣ ಇಲಾಖೆಯ ಕನ್ನಡ ವಿಷಯ ಪರಿವೀಕ್ಷಕ ಕೆ.ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.




