ಬಳ್ಳಾರಿ: ರಾಜ್ಯದಲ್ಲಿ 2000 ಲೈನ್ಮೆನ್ ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಲೈನ್ಮೆೆನ್ಗ್ಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ ಎಂದರು.
ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ಮೆಗನ್ಗಲಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ಮೆ ನ್ಗಒಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದರು.




