ವಾಸಂತಿ ಅಮರ್ ಸೇರಿ 8 ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಲೋಕಾಯುಕ್ತ ದಾಳಿ
ಬೆಂಗಳೂರು: ನಿಗದಿತ ಆದಾಯ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು, ಐಎಎಸ್ ಅಧಿಕಾರಿ ವಾಸಂತಿ ಅಮರ್ ಸೇರಿ 8 ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ದಾಖಲೆಗಳು ನಗದು ಮತ್ತು ಚಿನ್ನಾವರಣ ವಶಪಡಿಸಿಕೊಂಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ರಾಜಧಾನಿ ಬೆಂಗಳೂರು, ಮೈಸೂರು, ಕೊಪ್ಪಳ, ಬಳ್ಳಾರಿ, ಮಡಿಕೇರಿ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಈ ದಾಳಿ ನಡೆಸಿದರು. ಐಎಎಸ್ ಅಧಿಕಾರಿ ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು,ಈಗ ರೈಲ್ವೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಂಪನಿಯ ವಿಶೇಷ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಗರ ಹಾಗೂ ಗ್ರಾಮೀಣ ಯೋಜನೆ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಬಗಲಿ ಮಾರುತಿ ಹಾಗೂ ಬಿಬಿಎಂಪಿ ಸಿವಿರಾಮನ್ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಹೆಚ್.ವಿ.ಯಾರಪ್ಪ ರೆಡ್ಡಿ ಅವರ ಕಚೇರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ಕೈಗೊಂಡರು.
ಮೈಸೂರಿನಲ್ಲಿ ಸಿದ್ದಾರ್ಥ ಬಡಾವಣೆಯ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ದಾಳಿ ಪರಿಶೀಲನೆ ನಡೆಯಿತು. ಜೊತೆಗೆ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ.
ಚಿನ್ನದ ರಾಶಿ ಪತ್ತೆ: ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಈ ವೇಳೆ ಅವರ ಮನೆಯಿಂದ ಅಪಾರ ಪ್ರಮಾಣದಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.
ಮಾರುತಿ ಅತ್ತೆಯ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಗ್ರಾಮಪಂಚಾಯತ್ ಅಧ್ಯಕ್ಷೆ ರಜನಿ ಷಣ್ಮುಖಗೌಡ (ಮಾರುತಿ ಅತ್ತೆ) ಮನೆ ಮೇಲೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್ಗೆ ಶಾಕ್ ನೀಡಿದ್ದಾರೆ. ಬೆಳಿಗ್ಗೆಯೇ ಲೋಕಾ ಅಧಿಕಾರಿಗಳನ್ನು ಅವರು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.
ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ, ರಾಮನಗರದ ಜಿಲ್ಲಾಸ್ಪತ್ರೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆದಿದೆ. ಕೆಲ ಅವ್ಯವಹಾರ ಆರೋಪ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಮೈಸೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಕಚೇರಿ ಮನೆಗಳ ಮೇಲೆ ದಾಳಿ ನಡೆಸಿದ ಪರಿಶೀಲಿಸಲಾಗಿದೆ. ತುಮಕೂರು, ಬೀದರ್ನಲ್ಲೂ ಲೋಕಾಯುಕ್ತ ದಾಳಿ ನಡೆದಿದೆ.
ದಾಳಿಗೊಳಗಾದ ಅಧಿಕಾರಿಗಳು:
ವಾಸಂತಿ ಅಮರ್ ಐಎಎಸ್, ರೈಲ್ವೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಂಪನಿಯ ವಿಶೇಷ ಉಪ ಆಯುಕ್ತೆ, ಬೆಂಗಳೂರು
ಮಂಜುನಾಥ ಸ್ವಾಮಿ ಜಂಟಿ ನಿರ್ದೇಶಕ
ಸ್ಕಿಲ್ ಡೆವಲಪ್ಮೆಂಟ್ ಮಡಿಕೇರಿ
ವೆಂಕಟರಾಮ್
ಕಚೇರಿ ಸಹಾಯಕ ನಗರ ಪಾಲಿಕೆ ಮೈಸೂರು
ರಾಜೇಶ್ ಎಇಇ ಕೆಐಎಡಿಬಿ ತುಮಕೂರು
ಸುನೀಲ್ ಕುಮಾರ್ ಇಇ ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ವಿಭಾಗ ಕಲಬುರಗಿ
ಶೇಖು ಸಹಾಯಕ ನಿರ್ದೇಶಕ ಕೈಗಾರಿಕಾ ಕೇಂದ್ರ ಕೊಪ್ಪಳ
ಬಗಲಿ ಮಾರುತಿ ಸಹಾಯಕ ನಿರ್ದೇಶಕ
ನಗರ ಹಾಗೂ ಗ್ರಾಮೀಣ ಯೋಜನೆ ಅಭಿವೃದ್ಧಿ ಇಲಾಖೆ
ಹೆಚ್.ವಿ.ಯಾರಪ್ಪ ರೆಡ್ಡಿ ಇಇ
ಬಿಬಿಎಂಪಿ ಸಿವಿರಾಮನ್ ನಗರ ವಿಭಾಗ




