ಬೆಂಗಳೂರು: ನಿಗದಿತ ಆದಾಯ ಮೂಲಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆದಾಯ ಮತ್ತು ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ವರದಿಗಳ ಆಧಾರದಲ್ಲಿ ಏಳು ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಕ್ರಮ ಆಸ್ತಿ ದಾಖಲೆ ಪತ್ರಗಳು ನಗದು ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಗ್ರೂಪ್ ಎ ಮುಖ್ಯ ಎಂಜಿನಿಯರ್ ಆಗಿರುವ ಟಿ.ಡಿ ನಂಜುಂಡಪ್ಪ, ಗುಣಮಟ್ಟ ನಿಯಂತ್ರಣ ಮತ್ತು ಗುಣಮಟ್ಟ ಭರವಸೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆದ್ದಾರಿ ಗ್ರೇಡ್-1 ಎಂಜಿನಿಯರ್ ಆಗಿರುವ ಎಚ್.ಬಿ ಕಳೇಶಪ್ಪ, ಕೋಲಾರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ನಾಗರಾಜ್, ಕಲಬುರಗಿಯ ಯೋಜನಾ ಅನುಷ್ಠಾನ ಘಟಕದ ಜಗನ್ನಾಥ್, ದಾವಣಗೆರೆಯ ಆರೋಗ್ಯ ಇಲಾಖೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಘಟಕದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ. ಎಸ್. ನಾಗರಾಜು, ತುಮಕೂರಿನ ತಾವರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಮುಖ್ಯ ವೈದ್ಯಾಧಿಕಾರಿ ಡಾ.ಪಿ.ಜಗದೀಶ್, ಬಾಗಲಕೋಟೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಥಮ ವಿಭಾಗದ ಸಹಾಯಕ ಅಧಿಕಾರಿ ಮಾಳಪ್ಪ ಸಾಬಣ್ಣ ದುರ್ಗದ, ವಿಜಯಪುರ ಗೃಹ ಮಂಡಳಿ ಎಫ್‌ಡಿಎ ಶಿವಾನಂದ ಶಿವಶಂಕರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಗ್ರೂಪ್ ಎ ಮುಖ್ಯ ಎಂಜಿನಿಯರ್ ಆಗಿರುವ ಟಿ.ಡಿ ನಂಜುಂಡಪ್ಪ ಅವರ ಮನೆಯಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೆಜಿಗಟ್ಟಲೆ ಬೆಳ್ಳಿ ಹಾಗೂ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಇದರ ಜೊತೆಗೆ, ಸ್ತಿರಾಸ್ತಿಯ ಭಾಗವಾಗಿ 39 ಲಕ್ಷ ರೂ. ಮೌಲ್ಯದ ನಾಲ್ಕು ಕಾರುಗಳು ಹಾಗೂ 5 ಕೋಟಿ ಮೌಲ್ಯದ 2 ಮನೆಗಳು ಪತ್ತೆಯಾಗಿವೆ.




