ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ ಎಂದರು.
ಜನ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್ ಗಳನ್ನು ಬದಲಿಸಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗಮನಹರಿಸುವಂತೆ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.




