ಲೀಗಲ್ ಹೆಲ್ಪ್ ಡೆಸ್ಕ್ ಸ್ಥಾಪನೆಗೆ ಅಪ್ಸರ್ ಕೊಡ್ಲಿಪೇಟೆ ಕರೆ
ದಾವಣಗೆರೆ: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ದಾವಣಗೆರೆ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷ ಎ.ಆರ್.ತಾಹೀರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯಿತು.
- ಕಾವೇರಿ ವಿಚಾರವಾಗಿ ವಿಪಕ್ಷಗಳ ನಾಯಕ ವಿಶ್ವಾಸದ ಬಳಿಕ ಮುಂದಿನ ತೀರ್ಮಾನ: ಡಿ.ಕೆ.ಶಿವಕುಮಾರ್
- ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಯ್ದೆ ಕಾನೂನುಗಳು ಚರ್ಚಿತವಾಗಬೇಕು: ಡಾ.ಎಚ್.ಸಿ.ಮಹದೇವಪ್ಪ
- ನೀಟ್ NEET ಹೋರಾಟದ ನಡುವೆ ವೈರಲ್ ಆದ ರಾಹುಲ್ ಗಾಂಧಿ, ದೀಪ್ಕೆ, ಗ್ರೆಟಾ, ಸೊರೊಸ್ ಫೋಟೋ!
- ಸಾವಯವ ರೈತರನ್ನು ಬೆಂಬಲಿಸಲು ಸಾವಯವ ಸಂತೆಯಲ್ಲಿ ಪಾಲ್ಗೊಳ್ಳಿ: ದರ್ಶನ್ ಪುಟ್ಟಣ್ಣಯ್ಯ
- ಕನಿಷ್ಠ ವೇತನ ಕೂಡಲೇ ಜಾರಿಗೊಳಿಸದಿದ್ದರೆ ತೀವ್ರ ಪ್ರತಿರೋಧ: ಜೆ ಬಾಲಕೃಷ್ಣ ಶೆಟ್ಟಿ
ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನಾಯಕರು ಸಕ್ರಿಯವಾಗಿ ಭಾಗವಹಿಸಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪಕ್ಷದ ಬಲವರ್ಧನೆ, ಪ್ರಸ್ತುತ ರಾಜಕೀಯ ಪರಿಸ್ಥಿತಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಆಳವಾದ ಚರ್ಚೆಗಳು ನಡೆದವು.
ಸಭೆಯ ಮುಖ್ಯ ಅಜೆಂಡಾವಾಗಿ 2002 ರಜಾ ಉಲ್-ಮುಸ್ತಫಾ ನಗರದ ಮತದಾರರ ಪಟ್ಟಿಯಲ್ಲಿ ಹೆಸರುಗಳು ಕಾಣೆಯಾಗಿರುವ ವಿಚಾರಕ್ಕೆ ವಿಶೇಷ ಮಹತ್ವ ನೀಡಲಾಯಿತು. ಈ ಸಂಬಂಧ ಈಗಾಗಲೇ ಪಕ್ಷದ ವತಿಯಿಂದ ರಾಜ್ಯ ಚುನಾವಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿದ್ದು, ತಕ್ಷಣ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು. ಸಮಸ್ಯೆ ಶೀಘ್ರದಲ್ಲಿ ಪರಿಹಾರವಾಗದಿದ್ದಲ್ಲಿ, ಅಲ್ಲಿನ ಮತದಾರರನ್ನು ಒಳಗೊಂಡು ಪಕ್ಷದ ವತಿಯಿಂದ ಹೋರಾಟ ಕೈಗೊಳ್ಳುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಇದರ ಜೊತೆಗೆ, ಪಕ್ಷದ ವತಿಯಿಂದ ದಾವಣಗೆರೆ, ಹರಿಹರ, ಹೊನ್ನಾಳಿ, ದೊಡ್ಡಬಾತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ SIR ಎನುಮುರೇಶನ್ ಫಾರ್ಮ್‌ಗಳ ಭರ್ತಿ ಸಹಾಯ ಕೇಂದ್ರಗಳ ಪ್ರಗತಿ ವರದಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಅವರು ಪರಿಶೀಲಿಸಿದರು. ಮತದಾರರಿಗೆ ಉತ್ತಮ ರೀತಿಯಲ್ಲಿ ಸಹಕರಿಸುತ್ತಿರುವ ಪಕ್ಷದ ಬೂತ್ ಮಟ್ಟದ ಸಹಾಯಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
ಮುಂದಿನ ಹಂತವಾದ “Objection and Claims” ಪ್ರಕ್ರಿಯೆಯಲ್ಲಿ “Logical Discrepancy” ಹೆಸರಿನಲ್ಲಿ ಮತದಾರರಿಗೆ ಬರಲಿರುವ ನೋಟಿಸ್‌ಗಳ ಕುರಿತು ಜನರಿಗೆ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ಲೀಗಲ್ ಹೆಲ್ಪ್ ಡೆಸ್ಕ್‌ಗಳನ್ನು ಸ್ಥಾಪಿಸಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಭೆಯು ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಸಕ್ರಿಯವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ದೃಢ ಸಂಕಲ್ಪ ವ್ಯಕ್ತಪಡಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮದ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್, ಸಾದ್, ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಅಜರುದ್ದೀನ್, ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯದರ್ಶಿ ಝಬಿ ಆಜಾದ್ ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಸಮಿತಿ ಸದಸ್ಯರು ಹಾಜರಿದ್ದರು.




