ಚಿತ್ರದುರ್ಗ: ಮರ್ಯಾದೆಗೆ ಅಂಜಿ ಹೆಚ್‌ಐವಿ ಪೀಡಿತ ತಮ್ಮನನ್ನು ಕೊಲೆಗೈದು ತಪ್ಪಿಸಿಕೊಳ್ಳಲು ಯತ್ನಿಸಿದ ಅಕ್ಕ ಹಾಗೂ ಭಾವನನ್ನು ಹೊಳಲ್ಕೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಮಲ್ಲಿಕಾರ್ಜುನ್ (23) ಕೊಲೆಗೈದ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮಲ್ಲಿಕಾರ್ಜುನ್ ಬೆಂಗಳೂರಿನಲ್ಲಿ ಗಾರ್ಮೆಂರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಜುಲೈ 23ರಂದು ತನ್ನ ಸ್ವಗ್ರಾಮವಾದ ದುಮ್ಮಿಗೆ ಕಾರಿನಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದಾಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಅಪಘಾತ ಸಂಭವಿಸಿ ಕಾಲು ಮುರಿವಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದ.
ಅಪಘಾತಗೊಂಡಿದ್ದ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ನೀಡಲಾಗಿತ್ತು. ರಕ್ತ ಪರೀಕ್ಷೆ ವೇಳೆ ಮಲ್ಲಿಕಾರ್ಜುನ್ ಹೆಚ್‌ಐವಿ ಸೋಂಕಿತನಾಗಿರುವುದು ಪತ್ತೆಯಾಗಿದೆ. ಜುಲೈ 25ರಂದು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯಿಂದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಅಂಬುಲೆನ್ಸ್ ನಲ್ಲೇ ಮಲ್ಲಿಕಾರ್ಜುನನ್ನ ಅಕ್ಕನೇ ಕೊಲೆ ಮಾಡಿದ್ದಾರೆ. ಇದಕ್ಕೆ ಪತಿ ಮಂಜುನಾಥ್ ಕೂಡ ಸಾಥ್ ಕೊಟ್ಟಿದ್ದಾರೆ. ಆದರೆ ಇದು ಯಾರಿಗೂ ಗೊತ್ತಾಗದಂತೆ ನಡೆದುಕೊಂಡಿದ್ದಾರೆ.
ಇನ್ನು ಅಂತ್ಯಕ್ರಿಯೆ ವೇಳೆ ಮಲ್ಲಿಕಾರ್ಜುನ್‌ನ ಕುತ್ತಿಗೆ ಮೇಲಿದ್ದ ಗಾಯದ ಗುರುತು ಕಂಡು ಸಂಬಂಧಿಕರು ಹಾಗು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಮೃತನ ತಂದೆ ನಾಗರಾಜ್ ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ವೇಳೆ ಮಲ್ಲಿಕಾರ್ಜುನ ಹೆಚ್‌ಐವಿ ಪೀಡಿತ ಎಂಬ ಕಾರಣಕ್ಕೆ ಮರ್ಯಾದೆಗೆ ಅಂಜಿ ಸಹೋದರಿಯೇ ಹತ್ಯೆಗೈದಿರುವ ಕರಾಳ ಸಂಗತಿ ಬಹಿರಂಗವಾಗಿದೆ.
ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ನಿಶಾ ಹಾಗೂ ಆಕೆಯ ಪತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.




