ಬೆಂಗಳೂರು: ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸಾಗುವ ಹೇಳಿಕೆ ನೀಡಿದ್ದ ವಿಡಿಯೋ ಎಲ್ಲಿಂದ ಎನ್ನುವ ಮಾಹಿತಿಯು ಪ್ರಕರಣ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಲಭ್ಯವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೇ 31ರಂದು ಬೆಂಗಳೂರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವುದಾಗಿ ಕಳೆದ ಮೇ 27 ಸೋಮವಾರ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಪ್ರಜ್ವಲ್ ವಿಡಿಯೋ ಮಾಡಿರುವ ಸ್ಥಳವನ್ನು ಇದೀಗ ಎಸ್ಐಟಿ ಪತ್ತೆ ಮಾಡಿದೆ.
ಯೂರೋಪ್ ನ ಹಂಗೇರಿಯ ಬುಡಾಪೆಸ್ಟ್ ನಿಂದ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಬಿಡುಗಡೆಗೊಂಡ ಮೊಬೈಲ್ ವಿಳಾಸ ಪತ್ತೆ ಮಾಡುವ ಮೂಲಕ ಎಸ್ಐಟಿ ಈ ಮಾಹಿತಿ ಕಲೆ ಹಾಕಿದೆ. ವಿಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್ ಆಗಿತ್ತು ಎಂಬುದನ್ನೂ ಎಸ್ಐಟಿಯ ತಂತ್ರಜ್ಞರ ತಂಡ ಪತ್ತೆ ಮಾಡಿದೆ.
ಪ್ರಜ್ವಲ್ ದೇಶಕ್ಕೆ ಬರುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲು ಎಸ್ಐಟಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ ವಿದೇಶದಲ್ಲಿದ್ದ ಪ್ರಜ್ವಲ್ ಬರೋಬ್ಬರಿ ಒಂದು ತಿಂಗಳ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮೊದಲಿಗೆ ಅವರು ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆಯಲ್ಲಿ ಪ್ರಜ್ವಲ್ ಹೇಳಿದ್ದರು. ಅಲ್ಲದೆ, ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದರು. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದರು.
ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದೂ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದರು. ಸೋಮವಾರವಷ್ಟೇ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಪ್ರಜ್ವಲ್ ವಿಡಿಯೋ ಮಾಡಿರುವ ಸ್ಥಳವನ್ನು ಇದೀಗ ಎಸ್ಐಟಿ ಪತ್ತೆ ಮಾಡಿದೆ.
ಅತ್ಯಾಚಾರ ಅರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕಳೆದ 31 ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ಅವರು ಮೊನ್ನೆ ಅಷ್ಟೇ ವಿಡಿಯೋ ಬಿಡುಗಡೆ ಮಾಡಿದ್ದು, ಮೇ 31ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಪ್ರಜ್ವಲ್ ಪರ ವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಅರ್ಜಿಯನ್ನು ಇಂದೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲರು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಲಿಲ್ಲ. ಮೇ 31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ಹೇಳಿದರು. ಹೀಗಾಗಿ ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ನಿಗದಿಯಾದಂತಾಗಿದೆ.




