ಬೆಂಗಳೂರು: ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿ ಅಂಶ ಒಡ್ಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿರುವ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ಎಸ್ಐಟಿ ರಚನೆ ಮಾಡಲಾಗುತ್ತಿದೆ. ಆಪರೇಷನ್ ಕಮಲಕ್ಕೆ 50 ಕೋಟಿ ಆಮಿಷ ಒಡ್ಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಆರೋಪ ಮಾಡಿದ್ದಾರೆ. ಈ ಆರೋಪದ ಬಗ್ಗೆ ನಿಖರವಾಗಿ ಹೇಳುತ್ತಿದ್ದಾರೆ. ಸರ್ಕಾರ ನಡೆಸುತ್ತಿರುವವರೂ ಅವರೇ. ಇದಕ್ಕೂ ಒಂದು ಎಸ್ಐಟಿ ರಚನೆ ಮಾಡಿ ತನಿಖೆ ಮಾಡಿಸಲಿ ಎಂದರು.
ರಾಜ್ಯ ಮತ್ತು ದೇಶದ ಇತಿಹಾಸದಲ್ಲಿ ಇಷ್ಟೊಂದು ಎಸ್ಐಟಿ ರಚನೆಯಾಗಿರುವುದು ದಾಖಲೆಯಾಗಿದೆ. ಪ್ರತಿಯೊಂದು ವಿಚಾರಕ್ಕೂ ಎಸ್ಐಟಿ ರಚನೆ ಮಾಡುವುದಾಗಿ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರು ಆಪರೇಷನ್ ಕಮಲದ ಬಗ್ಗೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು.




