ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ಯುವಕ ಹಾಗೂ ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಬಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ತಿಳಿಸಿದ್ದಾರೆ.




