ಬೆಂಗಳೂರು: ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಎಸ್.ಮನೋಹರ್ ಅವರು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತಾಡಿದ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದಲ್ಲಿ ಕಳೆದ 30 ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಮತ್ತು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಸಚಿವ ಸಂಪುಟದ ಸಚಿವರ ಸಹಕಾರ, ಬೆಂಬಲದಿಂದ ಇಂದು ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೃೀಸ್ ಲಿಮಿಟೆಡ್ ಅಧ್ಯಕ್ಷನಾಗಿ ಸೇವೆ ಮಾಡುವ ಅವಕಾಶ ಕಾಂಗ್ರೆಸ್ ಪಕ್ಷ ನೀಡಿದೆ ಎಂದರು.
ಬಡವರ, ದೀನದಲಿತರ ಪರ ಹೋರಾಟ ಮಾಡುವ, ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನ ಕೊಟ್ಟ ಪಕ್ಷ ಕಾಂಗ್ರೆಸ್ ಪಕ್ಷ. ಸರ್ಕಾರದ 5 ಗ್ಯಾರಂಟಿ ಯೋಜನೆಗಳು ನಾಡಿನ ಪ್ರತಿ ಕುಟುಂಬಗಳಿಗೆ ತಲುಪಿವೆ. ಅನ್ನಭಾಗ್ಯ, 200 ಯೂನಿಟ್ ವಿದ್ಯುತ್ ಉಚಿತ, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಮತ್ತು ಮನೆಯ ಯಾಜಮಾನಿಗೆ 2000, ಯುವನಿಧಿ ಯೋಜನೆಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಆರ್ಥಿಕವಾಗಿ ಸಬಲರಾಗಿ, ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗಿವೆ ಎಂದರು.
ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಚಲನಚಿತ್ರ ನಿರ್ಮಾಪಕ ಸಾ.ರಾಗೋವಿಂದು, ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ, ಕೆಪಿಸಿಸಿ ಮಹಿಳಾ ಘಟಕದ ಶುಭಾ, ಶಾಂಭವಿ, ಇಂದಿರಾ, ಪರಿಸರ ರಾಮಕೃಷ್ಣ, ಜನಾರ್ದನ್, ಆನಂದ್, ಸುಧಾಕರ್ ಮೊದಲಾದವರು ಇದ್ದರು.




