ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಯಾವುದೇ ಕಾರಣಕ್ಕೂ ಸನ್ನದುದಾರರಿಗೆ ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿರುವ ಸಿಎಂ ಸಿದ್ದರಾಮಯ್ಯ, ನೆರೆರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ತೆರಿಗೆ ಸಂಗ್ರಹಕ್ಕೆ ನಿಗದಿ ಪಡಿಸಿರುವ ಗುರಿ ತಲುಪಬೇಕೆಂದು ಸೂಚಿಸಿದರು. ಈ ವೇಳೆ ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸೂಚಿಸಿದರು.
ಇಲಾಖೆಯಲ್ಲಿ ಖಾಲಿಯಿರುವ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.
ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಆನ್ಲೈನ್ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.




