ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ನಿವೇಶನ ಹಂಚಿಕೆ ಅಕ್ರಮ ಆರೋಪದ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ಮತ್ತೊಂದು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಲೋಕಾಯುಕ್ತದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಇದರಿಂದ ತಮಗೆ ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ರಕ್ಷಣೆ ಬೇಕು ಎಂದು ಕೋರಿದ್ದಾರೆ.
ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು.
ಇದನ್ನು ತಮ್ಮ ದೂರಿನಲ್ಲಿ ಉಲ್ಲೇಖಿಸಿರುವ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಂದ ತಮ್ಮ ಮೇಲೆ ದಾಳಿ ನಡೆಸುವಂತೆ ಪ್ರಚೋದನೆ ನೀಡುವ ಕೆಲಸ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ತಾವುಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪ್ರತ್ಯೇಕ ದೂರುಗಳನ್ನು ರವಾನಿಸಿರುವ ಸ್ನೇಹಮಯಿ ಕೃಷ್ಣ, ಇಂತಹ ಪ್ರಚೋದನೆಯಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತೊಂದರೆಯಾಗುವ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಹೇಳಿದ್ದಾರೆ.
ತಮಗೆ ದೊರೆತಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಪ್ರಭಾವಿ ವ್ಯಕ್ತಿಗಳು ಅಧಿಕಾರದ ಪ್ರಭಾವವನ್ನು ಬಳಸಿಕೊಂಡು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೈಸೂರು ಲೋಕಾಯುಕ್ತದ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತರಿಗೆ ದಾಖಲೆಗಳೊಂದಿಗೆ ಸಮಗ್ರ ವರದಿ ನೀಡಿ ಸರ್ಚ್ ವಾರೆಂಟ್ ಪಡೆದುಕೊಂಡು ಜು.26 ರಂದು ಶೋಧ ಕಾರ್ಯಾಚರಣೆ ಮೂಲಕ ದಾಖಲೆಗಳನ್ನು ವಶಪಡಿಸಿಕೊಳ್ಳಲು ತಯಾರಾಗಿದ್ದರು. ಆ ಸಮಯದಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ಸುಜಿತ್ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು ಎಂದು ಹೇಳಿದ್ದಾರೆ.
ಕೂಡಲೇ ಭೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಬಂದು ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅವುಗಳನ್ನು ಆಧರಿಸಿಯೇ ಸಿದ್ದರಾಮಯ್ಯನವರು ಪತ್ರಿಕಾಗೋಷ್ಠಿ ನಡೆಸಿ ವಿವರಣೆ ನೀಡಿದರು. ನಂತರ ಸುಜಿತ್ ಅವರನ್ನು ಬೆಂಗಳೂರಿನ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಯಿತು ಎಂದು ಆರೋಪಿಸಿದ್ದಾರೆ.



