ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆಯ ಅಕ್ರಮ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ವರದಿ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿಎಮ್ ಪಾರ್ವತಿ ಅವರಿಗೆ ನಿಯಮ ಬಾಹಿರವಾಗಿ ಬದಲಿ ನಿವೇಶನ ನೀಡಿರುವ ಪ್ರಕರಣದ ಕುರಿತಂತೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಮತ್ತು ಅವರ ಪತ್ನಿ ಸೇರಿದಂತೆ ಮೊದಲ ನಾಲ್ವರು ಆರೋಪಿಗಳ ವಿರುದ್ಧ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನಲ್ಲಿ ಕೆಲವು ಗೊಂದಲಗಳಿವೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ಆರೋಪಿ 1ರಿಂದ 4ರವರೆಗಿನ ಅರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಉಲ್ಲೇಖಿಸಿದ್ದಾರೆ.
ಅದೇ ವೇಳೆ ಕಾಲಂ 17ರಲ್ಲಿ ತನಿಖೆ ಮುಂದುವರಿಕೆಗೆ ಅನುಮತಿ ಕೋರಿದ್ದು, ಜತೆಗೆ 50-50ರ ಅನುಪಾತದಲ್ಲಿ 2ನೇ ಆರೋಪಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಈ ಹಿಂದಿನ ಮುಡಾ ಆಯುಕ್ತರಾದ ನಟೇಶ್ ಮತ್ತು ಇತರೆ ಸಿಬಂದಿ ಪರಿಹಾರವಾಗಿ ನೀಡಿದ್ದ 14 ನಿವೇಶನಗಳಿಂದ ಮುಡಾಕ್ಕೆ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಹೀಗಾಗಿ ಯಾವ ಅಂಶದ ಬಗ್ಗೆ ತನಿಖೆ ನಡೆಯಬೇಕು ಎಂದು ಸ್ಪಷ್ಟವಾಗಿ ಹೇಳಿಲ್ಲ ಎಂದು ದೂರುದಾರರ ಪರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದರು. ಅದನ್ನು ಗಮನಿಸಿದ ಕೋರ್ಟ್ ಸರಕಾರಿ ವಿಶೇಷ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ, ಈ ಕುರಿತು ಸೂಕ್ತ ಮಾಹಿತಿ ನೀಡುವಂತೆ ಸೂಚಿಸಿದರು. ಬಳಿಕ ಪ್ರಕರಣದ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಲಾಗಿದೆ.




