ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಾಂಸ್ಕೃತಿಕ ಸಮುಚ್ಛಯ ನಿರ್ವಹಣಾ ಸಮಿತಿ ವತಿಯಿಂದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜುಲೈ 20 ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರ ಸಾಂಸ್ಕೃತಿಕ ಸಮುಚ್ಛಯದಲ್ಲಿ ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕಾರ್ಯಕ್ರಮದಲ್ಲಿ ಬಳ್ಳಾರಿಯ ಪ್ರಕಾಶ್ ಹೆಮ್ಮಾಡಿ ಅವರಿಂದ ಜಾನಪದ ಜಾದು ಕಾರ್ಯಕ್ರಮ ಮತ್ತು ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿಯ ಧಾತ್ರಿ ರಂಗ ಸಂಸ್ಥೆಯಿಂದ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕ ಕಾರ್ಯಕ್ರಮ ಇರಲಿವೆ.
ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ವೀಕ್ಷಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಸಂಸ್ಕೃತಿ ಇಲಾಖೆ ಕೋರಿದೆ.




