ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಾಮಾಜಿಕ ಶೈಕ್ಷಣಿಕ ಗಣತಿ ಅಂತಿಮ ಅಂತ ತಲುಪಿದ್ದು, ಎರಡು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಶೇ. 98ರಷ್ಟು ಭಾಗ ಸಮೀಕ್ಷೆ ಪೂರ್ಣಗೊಂಡಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಮಾತ್ರ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಆನ್ ಲೈನ್ ನಲ್ಲಿ ಸಮೀಕ್ಷೆಗೆ ಮಾಹಿತಿ ನೀಡುವ ಗಡುವನ್ನು ಈ ತಿಂಗಳ 30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಸರಾಸರಿ ಶೇ.98ರಷ್ಟು ಸಮೀಕ್ಷೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಶೇ.92ರಷ್ಟು ಸಮೀಕ್ಷೆಯಾಗಿದೆ. ಇದೀಗ ಎಲ್ಲವನ್ನೂ ಕ್ರೋಡೀಕರಿಸುವ ಕೆಲಸ ಆರಂಭವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದರು.
ಕಚೇರಿಯಲ್ಲಿ ಕುಳಿತು ಸಮೀಕ್ಷೆ ನಡೆಸಲಾಗಿದೆ ಎಂಬ ಆರೋಪ ನಿರಾಧಾರ. ಜಿಪಿಎಸ್ ಆಧಾರಿತವಾಗಿ ಸಮೀಕ್ಷೆ ನಡೆದಿದೆ. ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದವರು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ಇತಿಹಾಸದಲ್ಲೇ ಈ ರೀತಿ ಕರಾರುವಕ್ಕಾಗಿ ಮಾಹಿತಿ ಕಲೆ ಹಾಕಿದ ಸಮೀಕ್ಷೆ ಬೇರೊಂದಿಲ್ಲ. ಯಾರು ಏನೇ ಟೀಕೆ ಮಾಡಿದರೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ಅತ್ಯತ್ತಮವಾಗಿ ನಡೆದಿದೆ ಎಂದರು.
ಆನ್ ಲೈನ್ ಸಮೀಕ್ಷೆಯಲ್ಲಿ ಭಾಗವಹಿಸಲು ಇದೇ ತಿಂಗಳ 30ರವರೆಗೂ ಗಡುವು ನೀಡಲಾಗಿದೆ. ಬೆಂಗಳೂರಿನಲ್ಲಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಉಳಿದ ಎಲ್ಲಾ ಜಿಲ್ಲೆಗಳ ಅಂಕಿಸಂಖ್ಯೆಗಳನ್ನೂ ಕ್ರೋಢೀಕರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.
ಬೆಂಗಳೂರು ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ ಮುಂದಿನ ರೂಪುರೇಷೆ ಸಿದ್ದ ಪಡಿಸಲಾಗುವುದು. ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ, ಒಂದೂವರೆ ಅಥವಾ ಎರಡು ತಿಂಗಳ ಒಳಗಾಗಿ ವರದಿ ಪಡೆದುಕೊಳ್ಳಲಾಗುವುದು ಎಂದರು.
ಸಮೀಕ್ಷೆಯಲ್ಲಿ ಭಾಗವಹಿಸಬೇಡಿ ಎಂದು ಕರೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜೆಸ್ವಿ ಸೂರ್ಯ ಅವರಿಗೆ ಮುಖಭಂಗವಾಗಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದ ಇನ್ಫೋಸಿಸ್ ನ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಾತುಗಳನ್ನು ಜನ ಕೇಳಿಲ್ಲ. ಎಲ್ಲರೂ ಬುದ್ದಿವಂತರಾಗಿ ಸಮೀಕ್ಷೆಯಲ್ಲಿ ಭಾಗವಹಿಸುವ ಮೂಲಕ ಮಾಹಿತಿಗಳನ್ನು ನೀಡಿದ್ದಾರೆ ಎಂದರು.




