ಬೆಂಗಳೂರು: ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹುಟ್ಟುಹಬ್ಬದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಶಾಲೆಯ ಮಕ್ಕಳಿಗೆ 5000 ಪ್ರೋತ್ಸಾಹ ಧನ ಮತ್ತು ಪೌರ ಕಾರ್ಮಿಕರ ಮಹಿಳೆಯರು ಮತ್ತು ಅಂಗನವಾಡಿ ಶಿಕ್ಷಕಿಯರಿಗೆ ಸೀರೆ ವಿತರಣೆ ಹಾಗೂ ಅಂಗನವಾಡಿ ಮಕ್ಕಳಿಗೆ ಟಿಫನ್ ಬಾಕ್ಸ್ ಗಳನ್ನು ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಕಾಂಗ್ರೆಸ್ ಪಕ್ಷದ ಮುಖಂಡ ಸುಧಾಕರ್ ಅಡಪ್ಪ, ಪಾಲಿಕೆ ಮಾಜಿ ಸದಸ್ಯ ರಾಮಚಂದ್ರ, ಕಾಂಗ್ರೆಸ್ ಪಕ್ಷದ ಮುಖಂಡರಾದ ಶಶಿ, ಮಹದೇವ್ ಭಾಗವಹಿಸಿದ್ದರು.
ಶ್ರೀನಿವಾಸಮೂರ್ತಿ ಮಾತನಾಡಿ, ನಾಡು ಕಂಡ ಶೇಷ್ಠ ಯುವ ರಾಜಕಾರಣಿ, ಸರಳ, ಸಜ್ಜನ ವ್ಯಕ್ತಿತ್ವ ಸಚಿವರಾದ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಸಂಘಟನೆ ಮಾಡಲಾಗುತ್ತಿದೆ ಎಂದರು.
ದಿನೇಶ್ ಗುಂಡೂರಾವ್ ರವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಉಚಿತ ಮತ್ತು ಹೈಟೆಕ್ ವೈದ್ಯಕೀಯ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಸರ್ವ ಜನಾಂಗದ ನಾಯಕ ಎಂದು ದಿನೇಶ್ ಗುಂಡೂರಾವ್ ರವರು ಹೆಸರು ಗಳಿಸಿದ್ದಾರೆ. 6 ಬಾರಿ ಶಾಸಕರಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದರು ಎಂದರು.
ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಲವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಬಡವರ ಸಹ ಆರ್ಥಿಕವಾಗಿ ಸಬಲರಾಗಿ, ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ದಿನೇಶ್ ಗುಂಡೂರಾವ್ ರವರ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.



