ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆದರೆ ಆನ್ ಲೈನ್ ಲಿಂಕ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಸರ್ವೀಸ್ ಲಭ್ಯವಿಲ್ಲ ಎಂದು ತೋರಿಸುತ್ತಿರುವ ಕಾರಣ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಮೇ 03 ರೊಳಗೆ ಸಲ್ಲಿಸಬೇಕು.
ಮೇ 09 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9480843023 ಗೆ ಸಂಪರ್ಕಿಸಬಹುದು.




