ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೆಚ್ಚು ಒತ್ತು ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, ಸೈಬರ್ ಅಪರಾಧಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಿ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿಪಿ) ಹುದ್ದೆಯನ್ನು ಪ್ರತ್ಯೇಕವಾಗಿ ಸೃಜಿಸಲಾಗಿದೆ. ಡಿಜಿ ಅವರ ಕೆಳಗೆ ಎಡಿಜಿಪಿ, ಐಜಿಪಿ ಹಾಗೂ 7 ಜನ ಎಸ್‌ಪಿಗಳು ಸೇರಿದಂತೆ, ಇತರೆ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಾರೆ. ಸೈಬರ್ ಅಪರಾಧಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ವಹಿಸಲಾಗುತ್ತಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯ ಕ್ರಮ ಕೈಗೊಂಡು ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್ (ಟ್ವೀಟರ್), ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಚಾನೆಲ್‍ಗಳ ಮೇಲೆ ನಿಗಾವಹಿಸಲು ರಾಜ್ಯಾದ್ಯಂತ ಪ್ರತ್ಯೇಕ ಸಾಮಾಜಿಕ ಜಾಲತಾಣ ನಿಗಾ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಪ್ರತಿ ಪೊಲೀಸ್ ಠಾಣೆಗಳಲ್ಲೂ ಪ್ರಾರಂಭಿಸಿ ಸೂಕ್ತ ತರಬೇತಿ ಪಡೆದ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.
ಸದರಿ ಘಟಕವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯೂಟ್ಯೂಬ್‌ಗಳಲ್ಲಿ ಪ್ರಸಾರವಾಗುವ ಪ್ರಚೋದನಕಾರಿ ಸಂದೇಶಗಳ/ ಸುಳ್ಳು ಸುದ್ದಿಗಳ/ ದ್ವೇಷ ಭಾಷಣಗಳ ಮೇಲೆ ಸಮಾಜದ ಸಾಮರಸ್ಯ ಹಾಳು ಮಾಡುವಂತವರ ಮೇಲೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ ಎಂದರು.
ಸುಳ್ಳು ಸುದ್ದಿಗಳ ಬಗ್ಗೆ ಕೆಎಸ್‌ಪಿ ಫ್ಯಾಕ್ಟ್‌ಚೆಕ್ ಆ್ಯಪ್ ಮೂಲಕ ಫ್ಯಾಕ್ಟ್‌ಚೆಕ್ ಮಾಡಿಸಿ ನೈಜ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಹಂಚಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ನಿಗಾವಣೆಯಲ್ಲಿ ಕಂಡುಬರುವ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಪೋಸ್ಟ್‌ಗಳನ್ನು ಕೂಡಲೇ ಅಧಿಕಾರಿಗಳ ಹಾಗೂ ರಾಜ್ಯ ಸಾಮಾಜಿಕ ಜಾಲತಾಣ ನಿಗಾ ಘಟಕದ ಗಮನಕ್ಕೆ ತರಲಾಗುತ್ತದೆ. ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಪೊಲೀಸ್ ಇಲಾಖೆಯು ಯಾವುದೇ ಹೆಚ್ಚುವರಿ ಹಣವನ್ನು ಭರಿಸುತ್ತಿಲ್ಲ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೂ ಸಹ ವಹಿಸಿರುವುದಿಲ್ಲ ಎಂದರು.




