ಬೆಂಗಳೂರು: ಜಾತಿಗಣತಿ ಎಂದೇ ಬಣ್ಣಿಸಲಾಗುತ್ತಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ವಿದ್ಯುಕ್ತವಾಗಿ ಆರಂಭಗೊಂಡಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸಮೀಕ್ಷೆ ನಡೆಸುವವರಿಗೆ ಹಲವೆಡೆ ದೊರಕದ ಕೈಪಿಡಿ ಸಿದ್ಧವಾಗದ ಮೊಬೈಲ್ ಆಪ್ ಸೇರಿದಂತೆ ಹಲವು ತೊಡಕುಗಳ ನಡುವೆಯೂ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಜಾತಿಗಳ ಪಟ್ಟಿಯಲ್ಲಿ ವಿವಾದ ಸೃಷ್ಟಿಸಿದ್ದ ಕ್ರೈಸ್ತ ಜಾತಿಗಳನ್ನು ಕೈಬಿಡಲಾಗಿದೆ.
ಈ ನಡುವೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು. ತಡೆಯಾಜ್ಞೆ ನೀಡಲು ನಿರಾಕರಿಸಿದ ಕೋರ್ಟ್, ಲಿಖಿತ ವಾದಾಂಶ ಸಲ್ಲಿಕೆಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.
ಜಾತಿ ಗಣತಿಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ, ಗಣತಿಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಅರ್ಜಿಯ ಪೂರ್ಣ ವಿಚಾರಣೆ ನಡೆಸಲಾಗುವುದು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಬಳಿಕ ಲಿಖಿತ ವಾದಾಂಶ ಸಲ್ಲಿಕೆಗೆ ಎಲ್ಲ ಅರ್ಜಿದಾರರ, ಸರಕಾರಿ ವಕೀಲರಿಗೆ ಪೀಠವ ಸೂಚನೆ ನೀಡಿತು.



