ಬೆಂಗಳೂರು: ನೇಹಾ ಹತ್ಯೆ ಕುರಿತಂತೆ ತಾವು ನೀಡಿರುವ ಹೇಳಿಕೆಯಿಂದ ಮೃತ ಮೇಹ ಕುಟುಂಬ ಸದಸ್ಯರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯದಲ್ಲಿ ತಾವಾಗಲಿ ಮುಖ್ಯಮಂತ್ರಿಗಳಾಗಲಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಆ ರೀತಿಯಲ್ಲಿ ಮಾತನ್ನು ಆಡಿಲ್ಲ. ಪ್ರಕರಣದ ಬಗ್ಗೆ ಸರ್ಕಾರ ತುಂಬಾ ಗಂಭೀರವಾದ ಕ್ರಮಕ್ಕೆ ಮುಂದಾಗಿದೆ ಎಂದರು.
ಆದರೂ ತಮ್ಮ ಹೇಳಿಕೆಯನ್ನ ಅವರ ಕುಟುಂಬ ಸದಸ್ಯರಿಗೆ ನೋವಾಗಿದೆ ಎಂಬ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ನೇಹ ಅವರ ತಂದೆ ತಾಯಿ ಹಾಗೂ ಕುಟುಂಬ ಸದಸ್ಯರ ಕ್ಷಮೆ ಕೇಳುತ್ತೇನೆ. ಪ್ರಕರಣದ ಬಗ್ಗೆ ತನಿಖೆ ಶೀಘ್ರದಲ್ಲಿ ಪೂರ್ಣಗೊಳಿಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದರು.




