ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸುವ ಕೆಲಸ ಆರಂಭವಾಗಿದ್ದು 2025ರ ನವೆಂಬರ್ 1 ಕ್ಕೆ ಮೂರು ವರ್ಷ ಮುಂಚಿತವಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು, ಹೊರಗುತ್ತಿಗೆ ನೌಕರರು ಮತದಾರರ ಪಟ್ಟಿಗೆ ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ದಾವಣಗೆರೆ, ಹರಿಹರ ಹಾಗೂ ಜಗಳೂರು ತಾಲ್ಲೂಕುಗಳು ಒಳಪಡುತ್ತವೆ. ಈ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಮತರದಾರರು ಈ ತಾಲ್ಲೂಕು ವ್ಯಾಪ್ತಿಯಲ್ಲಿ ಕನಿಷ್ಠ 6 ತಿಂಗಳಿಗಿಂತಲೂ ಹೆಚ್ಚಿನ ಅವಧಿಯಲ್ಲಿ ಖಾಯಂ ನಿವಾಸಿಯಾಗಿರಬೇಕು. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಗೆ ಅಂಗೀಕೃತ ವಿವಿಯಿಂದ ಪದವಿ ಪ್ರಮಾಣ ಪತ್ರ ಮತ್ತು ಅಗತ್ಯ ದಾಖಲೆಗಳೊಂದಿಗೆ ನಮೂನೆ-18 ಪ್ರತಿ, ಮತದಾರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಆಯೋಗ ನಿಗದಿಪಡಿಸಿದ ದಾಖಲೆಗಳೊಂದಿಗೆ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದು.
ದಾವಣಗೆರೆ ನಗರದ ಉತ್ತರ ಮತ್ತು ದಕ್ಷಿಣ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಅರ್ಹ ಪದವೀಧರರು ಮಹಾನಗರ ಪಾಲಿಕೆ, ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿನ ಅರ್ಹ ಪದವೀಧರರ ನೋಂದಣಿಗೆ ತಾಲ್ಲೂಕು ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ನಮೂನೆ 18 ಕನ್ನಡ, ಇಂಗ್ಲೀಷ್ ಡೌನ್ಲೋಚಡ್ಗಾಶಗಿhttps://ceo.karnataka.gov.in/uploads/mediatoupload1693469269.pdf ಅಥವಾ https://ceo.karnataka.gov.in/uploads/mediatoupload1693469289.pdf ಜಾಲತಾಣದಲ್ಲಿ ಡೌನ್ಲೋ/ಡ್ ಮಾಡೊಕೊಳ್ಳಬಹುದು.
ಸಹಾಯಕ ನೊಂದಣಾಧಿಕಾರಿಗಳ ವಿವರ: ದಾವಣಗೆರೆ ನಗರ ಉತ್ತರ ವ್ಯಾಪ್ತಿಗೆ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಎಂ.ಬಿ.ಗುರುಪ್ರಸಾದ್, ಮೊ.ಸಂಖ್ಯೆ 9611400040, ದಾವಣಗೆರೆ ದಕ್ಷಿಣ ವ್ಯಾಪ್ತಿಗೆ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್.ಸಚಿನ್, ಮೊ.ನಂ 78289137361, ದಾವಣಗೆರೆ ಕೆ.ಆರ್.ದೇವರಾಜ್ ಮೊ.8197128162, ಹರಿಹರ ವಿ.ಪ್ರಶಾಂತ್ ಮೊ.97433661524, ಜಗಳೂರು ಜಿ.ಕೆ.ಮಂಜುನಾಥ್ ಮೊ.8296418321 ಗೆ ಸಂಪರ್ಕಿಸಬಹುದು.




