ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಯ ಹಾಜರಾತಿ ಹಾಗೂ ಕಾರ್ಯದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಕೂಡ ಇದು ನಿರೀಕ್ಷಿತ ಪರಿಣಾಮ ಬೀರುತ್ತಿಲ್ಲ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಕೇಳಿಬಂದ ವ್ಯಾಪಕ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಿಬ್ಬಂದಿ ಹಾಜರಾತಿ ಬಗ್ಗೆ ವಿಶೇಷ ಗಮನಹರಿಸುವಂತೆ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಈ ಹಿನ್ನೆಲೆಯಲ್ಲಿ ಇಲಾಖೆಯ ಮುಖ್ಯಸ್ಥರು ಸಿಬ್ಬಂದಿ ಹಾಜರಾತಿ ಬಗ್ಗೆ ಹೊಸ ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಅನಧಿಕೃತ ಗೈರು ಹಾಜರಿ ಹಾಗೂ ಕೆಲಸದ ಅವಧಿಯಲ್ಲಿ ಕಚೇರಿಯಲ್ಲಿ ಹಾಜರಿರದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಸಿಬ್ಬಂದಿ
a. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
b. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
c. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
d. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿ ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
e. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿ ಹೆಸರು ಮತ್ತು ಹುದ್ದೆ ಸೂಚಿಸುವ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
f. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
g. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
h. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
i. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
j. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.




