ಶಿವಮೊಗ್ಗ: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾö್ಯಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.




