ಬೆಂಗಳೂರು: ಜನವರಿ 22ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ (MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.
ದೆಹಲಿಗೆ ಭೇಟಿ ನೀಡುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ವರಿಷ್ಠರು ಕರೆ ನೀಡಿದರೆ ದೆಹಲಿಗೆ ತೆರಳುತ್ತೇನೆ ಎಂದರು.
ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತ್ತುಗೊಳಿಸಲಾಗಿದೆ ಎಂದರು.



