ಬಿಜೆಪಿಯಿಂದ ಮತದಾರರ ಚೇತನ ಮಹಾಭಿಯಾನ ಎಂಬ ವಿಶೇಷ ಕಾರ್ಯಕ್ರಮ: ಶೋಭಾ ಕರಂದ್ಲಾಜೆ

3 years ago

#special #program #Chetana #Mahabhiyana #BJP #ShobhaKarandlaje

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರದ‌ ಸಿದ್ದತೆ ಆರಂಭಿಸಿರುವ ಬಿಜೆಪಿ ತನ್ನ ಪರವಾದ ಮತದಾರರನ್ನು ಒಗ್ಗೂಡಿಸುವ ದೃಷ್ಟಿಯಿಂದ ಮತದಾರರ ಚೇತನ ಮಹಾಭಿಯಾನ ಎಂಬ ವಿಶೇಷ ಕಾರ್ಯಕ್ರಮ ರೂಪಿಸಿದೆ. ರಾಜ್ಯದಲ್ಲಿ ಈ ಅಭಿಯಾನದ ನೇತೃತ್ವವನ್ನು ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ವಹಿಸಿದ್ದಾರೆ. ಈ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ಮತದಾರರು ಪ್ರಧಾನಿ ಮೋದಿ ಅವರ ಕ್ರಿಯಾಶೀಲ ನಾಯಕತ್ವ ಹಾಗೂ ಬಿಜೆಪಿಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಈ ಕಾರಣದಿಂದಲೇ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಸಂಪೂರ್ಣ ಬಹುಮತದೊಂದಿಗೆ ಎನ್ಡಿ್ಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಮತ್ತೊಮ್ಮೆ 2024ರ ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ದೇಶವನ್ನು ಮತ್ತೆ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮತದಾರರ ಚೇತನ ಮಹಾಭಿಯಾನಕ್ಕೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಪ್ರತಿ ಲೋಕಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಇದು ಚುನಾವಣಾ ವ್ಯವಸ್ಥೆಯಲ್ಲಿ ಅತ್ಯಂತ ಮುಖ್ಯವಾದ ಪ್ರಕ್ರಿಯೆ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ನಿರ್ದೇಶನದಂತೆ ಹೊಸ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಆದ್ಯತೆಯ ಮೇರೆಗೆ ಮಾಡಬೇಕಾಗಿದೆ. ಇದಕ್ಕಾಗಿ 58 ಸಾವಿರಕ್ಕೂ ಹೆಚ್ಚು ಬೂತ್ಗಯಳಲ್ಲಿ ಈ ಕಾರ್ಯ ನಡೆಯಲಿದೆ ಎಂದರು.

ಪ್ರತೀ ಜಿಲ್ಲೆಯಲ್ಲಿ ಈ ಕಾರ್ಯಕ್ಕಾಗಿ 3 ಸದಸ್ಯರ ಜಿಲ್ಲಾ ಸಮಿತಿ ಮತ್ತು ವಿಧಾನಸಭೆ ಕ್ಷೇತ್ರಕ್ಕೆ 3 ಜನರ ಸಮಿತಿ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ವಿಧಾನಸಭಾ ಮಟ್ಟದಲ್ಲಿ ಬಿಎಲ್ಎರ-1 ಮತ್ತು ಬೂತ್ ಮಟ್ಟದಲ್ಲಿ ಬಿಎಲ್ಎಟ-2 ನೇಮಕ ಮಾಡುತ್ತಿದ್ದೇವೆ. ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಾಗಾರ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಬಿಎಲ್ಎರ-2 ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟ ಬಿಎಲ್ಒೆ ಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಮತ್ತು ಅಗತ್ಯಕ್ಕೆ ಅನುಗುಣವಾಗಿ ತಮ್ಮ ದೂರುಗಳನ್ನು ನೋಂದಾಯಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

ಶಕ್ತಿ ಕೇಂದ್ರ ಮಟ್ಟದಲ್ಲಿ ತಾಂತ್ರಿಕ ಹಿನ್ನೆಲೆ ಹೊಂದಿರುವ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಹೊಸ ಮತದಾರರ ನೋಂದಣಿಗೆ ಅರ್ಜಿ ನಮೂನೆ-6, ಸೇರ್ಪಡೆ ಆಗುವ ಹಾಗೂ ತೆಗೆದು ಹಾಕುವ ಕ್ರಿಯೆಗೆ ನಮೂನೆ-7, ವಿಳಾಸ ಬದಲಾವಣೆಗೆ ನಮೂನೆ-8 ಅರ್ಜಿಗಳನ್ನು ಅಗತ್ಯ ಪ್ರಮಾಣದಲ್ಲಿ ಮುದ್ರಿಸಿ ಬೂತ್ ಮಟ್ಟದಲ್ಲಿ ವಿತರಿಸಲಾಗುತ್ತದೆ. ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ಪ್ರಚಾರವನ್ನು ಆಯೋಜಿಸಲಿದ್ದೇವೆ. ಇದಕ್ಕಾಗಿ ನಾವು 7 ದಿನಗಳ ಅಲ್ಪಾವಧಿಯ ವಿಸ್ತಾರಕ್ ಯೋಜನೆಯನ್ನು ಮಾಡಿಸಲಿದ್ದೇವೆ ಎಂದರು.

ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ನಕಲಿ ಮತದಾರರನ್ನು ತೆಗೆಸುವುದು ಮತ್ತು ವರ್ಗಾವಣೆ ಪ್ರಕ್ರಿಯೆಗೆ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸಾವಿರ, ಅದಕ್ಕಿಂತ ಚಿಕ್ಕ ಕ್ಷೇತ್ರಗಳಲ್ಲಿ 10 ಸಾವಿರ ಮತ್ತು ಸಣ್ಣ ಕ್ಷೇತ್ರಗಳಲ್ಲಿ 5 ಸಾವಿರ ಮತದಾರರ ಗುರಿಯನ್ನು ನಿಗದಿಪಡಿಸಲಾಗಿದೆ. ಸಂಪೂರ್ಣ ಪ್ರಚಾರದ ಅಭಿಯಾನವನ್ನು ಚುನಾವಣಾ ಆಯೋಗವು ನಿಗದಿ ಪಡಿಸಿದ ದಿನಾಂಕಗಳಿಗೆ ಅನ್ವಯವಾಗುವಂತೆ ಯೋಜಿಸಲಾಗುತ್ತದೆ ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು ಮತ್ತು ಪ್ರತೀ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ಮಾಡುವುದು ದೇಶದ ದೊಡ್ಡ ಉತ್ಸವ. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆ ಮತ್ತು ವಿಧಾನಸಭಾ ಮಟ್ಟದಲ್ಲಿ ಸಂಪೂರ್ಣ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

Leave a Reply