ಬೆಂಗಳೂರು: ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದೆ. ಅಧಿಸೂಚನೆ ಹೊರಬಿದ್ದ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳುಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್ ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್ ಗೆ ಮನವಿ ಮಾಡುವುದು ಅನಿವಾರ್ಯ ಎಂದರು.
ಡೀಮ್ಡ್ ಅರಣ್ಯ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಸರ್ವೆ ನಂಬರ್ ನಲ್ಲಿ ಕೂಡ ಮನೆಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಕಟ್ಟಡ, ಪಟ್ಟಾಭೂಮಿ ಇದೆ. ಈಗ ಅಂತಿಮವಾಗಿ ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸುವ ಅವಕಾಶ ದೊರೆತಿದ್ದು, ಸಮರ್ಪಕವಾಗಿ ಸರ್ವೆ ನಡೆಸಿ ಕೈಬಿಡಲು ಅರ್ಹವಾದ ಜಮೀನಿನ ಪ್ರಮಾಣ ನಿರ್ಧರಿಸಿ, ಅದಕ್ಕೆ ಪರ್ಯಾಯವಾಗಿ ಬೇರೆ ಕಡೆ ಕಂದಾಯ ಭೂಮಿ ನೀಡುವುದಾಗಿ ಮತ್ತು ಅಲ್ಲಿ ಅರಣ್ಯ ಬೆಳೆಸುವುದಾಗಿ ತಿಳಿಸಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಬಹುದಾಗಿದೆ ಎಂದರು.
ಈಗಾಗಲೇ 2022ರಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿರುವ ಡೀಮ್ಡ್ ಅರಣ್ಯ ಕುರಿತ ಪ್ರಮಾಣಪತ್ರ ಸಾರ್ವಜನಿಕರಿಗೆ ಲಭ್ಯವಾಗುವಂತೆ ಇಲಾಖೆಯ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡುವಂತೆ ಸೂಚನೆ ನೀಡಿದರು.
ಹಾಸನ ಜಿಲ್ಲೆಯ ಅರಸೀಕೆರೆ ವ್ಯಾಪ್ತಿಯಲ್ಲಿನ ಕರಡಿ ಧಾಮದ ಸುತ್ತ ಪ್ರಸ್ತುತ 10 ಕಿ.ಮೀ. ಬಫರ್ ವಲಯ ಎಂದು ಘೋಷಿಸಲಾಗಿರುವ ಕಾರಣ ಗಡಿ ಭಾಗದ ಚಿಕ್ಕಮಗಳೂರು ರೈತರೂ ಸಂಕಷ್ಟ ಎದುರಿಸುವಂತಾಗಿದೆ ಎಂಬ ಶಾಸಕರ ಮನವಿಗೆ ಸ್ಪಂದಿಸಿದ ಈಶ್ವರ್ ಖಂಡ್ರೆ, ಈ ಮಿತಿಯನ್ನು 1 ಕಿ.ಮೀ.ಗೆ ಇಳಿಕೆ ಮಾಡಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶೀಘ್ರವೇ ಈ ಸಮಸ್ಯೆ ಬಗೆಹರಿಯುತ್ತದೆ ಎಂದರು.




