ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ. ಅದೇ ರೀತಿ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಫೆ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್, ಚಿತ್ರದುರ್ಗ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ.
ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆದುಕೊಂಡು, ಯುವನಿಧಿ ನೋಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವೈಶಾಲಿ ಗೇಟ್, ಸ್ಟೇಡಿಯಂ ರೋಡ್, ಚಿತ್ರದುರ್ಗ ಇಲ್ಲಿ ಸಂಪರ್ಕಿಸಬಹುದು.
Chitradurga Special registration till February 15 for Yuvanidhi Scheme




