ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.
ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು.
ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ ಎಂದರು.
ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಚರಿಕೆ ಸದಾ ಇರಲಿ ಎಂದರು.




