ನ. 18 ರಂದು ಶ್ರೀ ಕನಕದಾಸ ಜಯಂತಿ

2 years ago

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನವೆಂಬರ 18 ರಂದು ಬೆಳಿಗ್ಗೆ 11  ಗಂಟೆಗೆ ಶ್ರೀ ಕನಕದಾಸ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.


ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರಾದ ಬಸಪ್ಪ ಗುಡೆಣ್ಣವರ, ದೇವರಾಜ ಕಂಬಳಿ, ಎನ್.ಎನ್.ಸವಣೂರ, ವಸಂತ ಬಿಳೆಲಿ ಹಾಗೂ ಸಾರ್ವಜನಿಕರು ಸಭೆಯಲ್ಲಿ ಹಾಜರಿದ್ದರು.

Leave a Reply