ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಅಭ್ಯಾಸ ಪುಸ್ತಕ ವಿತರಿಸಿದ ಸತೀಶ್ ಜಾರಕಿಹೊಳಿ

4 years ago

ಬೆಳಗಾವಿ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಸಿದ್ಧತೆಗಾಗಿ ಅಭ್ಯಾಸ ಪುಸ್ತಕ ವಿತರಣಾ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತಾಡಿದರು.

ಬೆಳಗಾವಿ ನಗರದ ಸಂಕಮ್‌ ಹೊಟೇಲ್‌ನಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ಹಮ್ಮಿಕೊಂಡಿದ್ದ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನ ನತ್ತ ನಮ್ಮ ಪಯಣ” ಅಭ್ಯಾಸ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಜಿಲ್ಲೆಯ 915 ಪ್ರೌಢ ಶಾಲೆಗಳ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ 13 ಲಕ್ಷ ರೂ. ಮೊತ್ತದಲ್ಲಿ 15,000 ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಚಾಲನೆ ನೀಡಲಾಯಿತು.

ಮಾಜಿ ಸಚಿವ ಎಂ.ಬಿ. ಪಾಟೀಲ್‌, ಶಾಸಕರಾದ ಪ್ರಸಾದ ಅಬ್ಯಯ್ಯಾ, ಗಣೇಶ ಹುಕ್ಕೇರಿ, ಟಿ. ರಘುಮೂರ್ತಿ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳಕರ್‌, ಅಂಜಲಿ ನಿಂಬಾಳಕರ್‌, ಮಾಜಿ ಸಂಸದ ಎಂ. ಚಂದ್ರಪ್ಪ ಸೇರಿದಂತೆ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮುಖಂಡರು, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply