ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೊದಲ ಅಗ್ನಿಪರೀಕ್ಷೆಯಾದ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಚುನಾವಣಾ ಆಯೋಗ 28.03.2024ರಂದು ಅಧಿಸೂಚನೆ ಹೊರಡಿಸಲಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯಕ್ಕೆ ಚಾಲನೆ ಸಿಗಲಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದ ದಕ್ಷಿಣ ಕರ್ನಾಟಕಕ್ಕೆ ಸೇರಿದ 14 ಲೋಕಸಭಾ ಕ್ಷೇತ್ರಗಳಲ್ಲಿ ಇದಕ್ಕಾಗಿ ಅಧಿಸೂಚನೆ ಪ್ರಕಟವಾಗಲಿದ್ದು, ಬಯಲುಸೀಮೆ ಚಿತ್ರದುರ್ಗ, ಮಲೆನಾಡಿನ ಚಿಕ್ಕಮಗಳೂರು-ಉಡುಪಿ, ಹಾಸನ, ಕರಾವಳಿ ಭಾಗದ ದಕ್ಷಿಣ ಕನ್ನಡ ಕ್ಷೇತ್ರ ಹೊರತುಪಡಿಸಿದರೆ ಬಹುತೇಕ ಹಳೆ ಮೈಸೂರು ಭಾಗದ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲಿ ಕೋಲಾರ ಹಾಗೂ ಚಾಮರಾಜನಗರ ಪರಿಶಿಷ್ಟ ಜಾತಿಗೆ (ಎಸ್.ಸಿ) ಮೀಸಲು ಕ್ಷೇತ್ರಗಳಾಗಿದ್ದರೆ, ಉಳಿದ 12 ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿವೆ. ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಆಯೋಗ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತಸಮರಕ್ಕೆ ಚಾಲನೆ ಸಿಗಲಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಮಹತ್ವದ ದಿನಗಳು:
ಮಾರ್ಚ್ 28, 2024 – ನಾಮಪತ್ರ ಸಲ್ಲಿಕೆ ಆರಂಭ
ಏಪ್ರಿಲ್ 4, 2024 – ನಾಮಪತ್ರ ಸಲ್ಲಿಸಲು ಕೊನೆಯ ದಿನ
ಏಪ್ರಿಲ್ 5, 2024 – ನಾಮಪತ್ರ ಪರಿಶೀಲನೆ
ಏಪ್ರಿಲ್ 8, 2024 ನಾಮಪತ್ರ ಹಿಂಪಡೆಯಲು ಕೊನೆಯ ದಿನ
ಏಪ್ರಿಲ್ 26, 2024 – ಮತದಾನ
ಜೂನ್ 4, 2024 ಮತ ಎಣಿಕೆ
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಕೇಂದ್ರ ಚುನಾವಣಾ ಆಯೋಗ ಎರಡು ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ.
ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಚಿತ್ರದುರ್ಗ ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರಲ್ಲಿ ಮೂರು ಕ್ಷೇತ್ರಗಳನ್ನು ಮಿತ್ರ ಪಕ್ಷವಾದ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಕಾಂಗ್ರೆಸ್ ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳ ಹೆಸರು ಪ್ರಕಟಿಸಿಲ್ಲ.



