ಧಾರವಾಡ: ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಸೂಚನೆ ನೀಡಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆಯು ಸರಕಾರೇತರ ಸಂಘ ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿತ ಕಾರ್ಯಾಚರಣೆ ವಿಧಾನ (ಸ್ಟಾಂಡರ್ಡ ಆಪರೇಟಿಂಗ್ ಪ್ರೋಸಿಜರ್) ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕು ಎಂದರು.
2018 ರ ಸಮೀಕ್ಷೆ ಪ್ರಕಾರ ಅವಳಿನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ 50 ಸಾವಿರ ಬೀದಿ ನಾಯಿಗಳು ಇರಬಹುದು ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಪಾಲಿಕೆಯಿಂದ ನಾಯಿಗಳ ಸರ್ವೆ ಹಾಗೂ ಸಂತಾನ ಚಿಕಿತ್ಸೆಗೆ ಅಗತ್ಯ ವೈಜ್ಞಾನಿಕ ಪದ್ಧತಿಯ ವಿವರಗಳನ್ನು ಟೆಂಡರ್ನಗಲ್ಲಿ ನಮೂದಿಸತಕ್ಕದ್ದು. ಸೂಕ್ತ ಸಂಘ-ಸಂಸ್ಥೆಗಳ ಹಾಗೂ ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿಗಾವಹಿಸಿ ಒಂದು ವರ್ಷದೊಳಗೆ ಸಮೀಕ್ಷೆ ಪೂರ್ಣಗೊಳಿಸಬಹುದು ಎಂದರು.
ಇದೇ ರೀತಿಯಲ್ಲಿ ಜಿಲ್ಲೆಯ ನಗರ ಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಸಹ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಸಮೀಕ್ಷೆ ಹಾಗೂ ಸಂತಾನ ಚಿಕಿತ್ಸೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಸೂಚಿಸಿದ ರೀತಿಯಲ್ಲಿ ನಾಯಿಗಳ ಗಣತಿಯನ್ನು ನಡೆಸತಕ್ಕದ್ದು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದು. ಕನಿಷ್ಠ 70 ಪ್ರತಿಶತದಷ್ಟು ನಾಯಿಗಳ ಜನನ ನಿಯಂತ್ರಣವನ್ನು ಹಂತ ಹಂತವಾಗಿ ಕೈಗೊಳ್ಳತಕ್ಕದ್ದು ಎಂದು ಸೂಚಿಸಿದರು.
ಬಿಡಾಡಿ ದನಗಳ ಬಗ್ಗೆ ಸಹ ಕ್ರಮವಹಿಸುವಂತೆ, ಬಿಡಾಡಿ ದನಗಳನ್ನು ಗೋಶಾಲೆಗೆ ಸೇರಿಸಿ ದಂಡ ವಿಧಿಸುವ ಕ್ರಮದ ಬಗ್ಗೆ ಮಾಲಿಕರಲ್ಲಿ ಅರಿವು ಮೂಡಿಸಿ. ಅವಳಿ ನಗರಗಳಲ್ಲಿ ಈ ಬಗ್ಗೆ ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ನೀಡಿ ಎಂದು ಸೂಚನೆ ನೀಡಿದರು.
ಧಾರವಾಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 27, 2024 ರವರೆಗೆ ರೇಬಿಸ್ ನಿರ್ಮೂಲನಾ ದಿನಾಚರಣೆಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಮ್ಮಿಕೊಂಡಿದ್ದು, ಉಚಿತವಾಗಿ ಸಾಕು ಹಾಗೂ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಗುವುದು. ಜಿಲ್ಲೆಯ ಎಲ್ಲ ನಗರ, ಪಟ್ಟಣ, ಗ್ರಾಮ ಸ್ಥಳೀಯ ಸಂಸ್ಥೆಗಳು ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಬೀದಿನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ರೇಬಿಸ್ ರೋಗ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಹುಬ್ಬಳ್ಳಿ-ಧಾರವಾಡ ಪಾಲಿಕೆಯು ಮುಖ್ಯ ಪಶುವೈದ್ಯಾಧಿಕಾರಿ ಡಾ. ಎ.ಜಿ.ಕುಲಕರ್ಣಿ ಮಾತನಾಡಿ, ಬೀದಿನಾಯಿಗಳ ಸಮೀಕ್ಷೆ ಹಾಗೂ ಸಂತಾನ ನಿಯಂತ್ರಣಕ್ಕೆ ಒಟ್ಟು 1.40 ಕೋಟಿ ರೂ ಟೆಂಡರ್ ಕರೆಯಲಾಗುತ್ತಿದ್ದು, ಪ್ರತಿ ನಾಯಿಯ ಶಸ್ತ್ರ ಚಿಕಿತ್ಸೆಗೆ 1650 ವೆಚ್ಚ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಭರಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ 2024ನೇ ಸಾಲಿನಲ್ಲಿ ಈವರೆಗೆ 2235 ಸಂತಾನಹರಣ ಚಿಕಿತ್ಸೆ ಕೈಗೊಳ್ಳಲಾಗಿದೆ ಎಂದರು.
ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಡಾ. ರವಿ ಸಾಲಿಗೌಡರ ಮಾತನಾಡಿ, ತಮ್ಮ ಪಾಲಿ ಕ್ಲಿನಿಕ್ನಉಲ್ಲಿ ಮೂರು ನುರಿತ ವೈದ್ಯರಿದ್ದು ಅವರಿಂದ ಸಂತಾನ ಚಿಕಿತ್ಸೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 28, 2024 ರಂದು ವಿಶ್ವ ರೇಬಿಸ್ ದಿನಾಚರಣೆ ಆಚರಿಸುತ್ತಿರುವದರಿಂದ ಇಲಾಖೆಯಿಂದ ಉಚಿತವಾಗಿ ರೇಬಿಸ್ ಲಸಿಕೆ ಹಾಕುತ್ತಿರುವುದರಿಂದ ಸಾರ್ವಜನಿಕರು ಕಡ್ಡಾಯವಾಗಿ ತಮ್ಮ-ಸಾಕು ನಾಯಿಗಳಿಗೆ ಲಸಿಕೆ ಹಾಕಿಸತಕ್ಕದ್ದು. ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.
ಹುಮೇನ್ ಸೋಸೈಟಿ ಇಂಟರ್ನ್ಯಾರಶನಲ್ ಇಂಡಿಯಾದ ಕರ್ನಾಟಕದ ಡಾ.ಮುಕೇಶ, ದೇಶದಲ್ಲಿ ಹಲವಾರು ನಗರಗಳಲ್ಲಿ ತಾವು ಬೀದಿನಾಯಿಗಳ ಸಮೀಕ್ಷೆ ಹಾಗೂ ಸಂತಾನಹರಣ ಚಿಕಿತ್ಸೆ ವೈಜ್ಞಾನಿಕವಾಗಿ ಕೈಗೊಂಡ ಬಗ್ಗೆ ಸಭೆಗೆ ವಿವರಿಸಿದರು.
ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ವಾರ್ಡನ್ ಡಾ. ಹೇಮಂತ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮೂಗನೂರಮಠ, ಎಸಿಎಫ್ ಪರಿಮಳಾ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.




