ಗೌರವ ಡಾಕ್ಟರೇಟ್ ದಂಧೆ ವಿರುದ್ಧ ರಾಜ್ಯ ಸರ್ಕಾರ ಕ್ರಮ: ಎಂ.ಸಿ.ಸುಧಾಕರ್

2 years ago

ಬೆಂಗಳೂರು: ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯ ಜೊತೆಗೆ ದಂಧೆಯಾಗಿ ಪರಿಣಮಿಸಿರುವ ಗೌರವ ಡಾಕ್ಟರೇಟ್ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ  ಮಂಜುನಾಥ್ ಭಂಡಾರಿ ವಿಷಯ ಪ್ರಸ್ತಾಪಿಸುವ ಮೂಲಕ ಗಂಭೀರ ಚರ್ಚೆಗೆ ವೇದಿಕೆ ಒದಗಿಸಿದರು..

ಇದಕ್ಕೆ ಉತ್ತರಿಸಿದ  ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕೆಲವು ವಿಶ್ವವಿದ್ಯಾನಿಲಯಗಳಿಂದ ನೀಡುವ ನಕಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಪಡೆಯುವುದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ  ಹೇಳಿದರು.

ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಪಕವಾಗಿ ನಕಲಿ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದರು.

Leave a Reply