ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗೆ 27.12.2024ರಂದು ಮತದಾನ ನಡೆಯಲಿದ್ದು, ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಅವರ ಸಹೋದರ ಬಿ.ಪಿ.ಕೃಷ್ಣೇಗೌಡ ಅವರ ನಡುವೆ ತೀವ್ರ ಪೈಪೋಟಿ ಇದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರ ಸದಸ್ಯತ್ವ ಹೊಂದಿರುವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗೆ 27.12.2024ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಸಂಘದಲ್ಲಿ ಮತದಾನ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.
ಅಧ್ಯಕ್ಷ ಸ್ಥಾನದ ಮರು ಆಯ್ಕೆಗಾಗಿ ಷಡಾಕ್ಷರಿ ಹಾಗೂ ಖಜಾಂಚಿ ಸ್ಥಾನಕ್ಕೆ ನಾಗರಾಜ.ಆರ್ ಜುಮನ್ನವರ ಸ್ಪರ್ಧಿಸಿದ್ದಾರೆ. ಇವರ ಎದುರಾಳಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಬಿ.ಪಿ.ಕೃಷ್ಣೇಗೌಡ, ಖಜಾಂಚಿ ಸ್ಥಾನಕ್ಕೆ ಶಿವರುದ್ರಯ್ಯ.ವಿ.ವಿ ಚುನಾವಣಾ ಕಣದಲ್ಲಿದ್ದಾರೆ.
ರಾಜ್ಯ ಪರಿಷತ್ ಸ್ಥಾನಗಳ ಚುನಾವಣೆಗೆ ಈಗಾಗಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನಿಂದ ರಾಜ್ಯ ಪರಿಷತ್ ನ 102 ಸದಸ್ಯರು, 193 ತಾಲ್ಲೂಕುಗಳಲ್ಲಿ ತಲಾ 4 ಜನರಂತೆ ಹಾಗೂ ಪ್ರತಿ ಜಿಲ್ಲೆಯಲ್ಲಿ ತಲಾ 4 ಪರಿಷತ್ ಸದಸ್ಯರು ಸಂಘದ ಅಧ್ಯಕ್ಷ, ಖಜಾಂಚಿ ಸ್ಥಾನದ ಚುನಾವಣೆಗಳಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು 964 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.



