ಬೆಂಗಳೂರು: ಹಣಕಾಸಿನ ಹೊರೆ ತಗ್ಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾಡಿದ ಆದೇಶವನ್ನು ತಾನೇ ಗಾಳಿಗೆ ತೂರಿದ ಘಟನೆ ಇದು. ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಎಂಜಿನಿಯರ್ ಆಗಿದ್ದ ಎನ್.ಪಿ. ಬಾಲರಾಜು ಅವರು, ಸೇವಾ ನಿವೃತ್ತಿಯಾಗಿ ಅದೇ ದಿನ ಅದೇ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಮಹತ್ವದ ಹುದ್ದೆ ಪಡೆದುಕೊಂಡಿದ್ದಾರೆ.
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
ಇದು ಈಗ ವಿವಾದಕ್ಕೆ ಕಾರಣವಾಗಿದೆ. ಆಗಸ್ಟ್ 31ರಂದು ನಿವೃತ್ತಿಯಾಗಿದ್ದ ಎನ್.ಪಿ. ಬಾಲರಾಜು ಅವರನ್ನು ಸೆಪ್ಟೆಂಬರ್ 1ರಿಂದ ಮಂಡಳಿಯ ಮುಖ್ಯ ತಾಂತ್ರಿಕ ಸಲಹೆಗಾರರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರ ಸೇವೆ ಸರ್ಕಾರಕ್ಕೆ ಹೊರೆ ಆಗಿದೆ ಎಂದು ಆರ್ಥಿಕ ಇಲಾಖೆ ನೀಡಿದ ವರದಿಯನ್ನು ಆಧರಿಸಿ, ರಾಜ್ಯ ಸರ್ಕಾರ ಕಳೆದ ಜೂನ್ 14ರಂದು ನಿವೃತ್ತ ಗುತ್ತಿಗೆ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿತ್ತು. ಅಲ್ಲದೇ ಇನ್ನು ಮುಂದೆ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡದಂತೆ ಸುತ್ತೋಲೆ ಹೊರಡಿಸಿತ್ತು.
ನಿಗಮ, ಮಂಡಳಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದ ಸಿಎಂ ಸಿದ್ದರಾಮಯ್ಯ ಅವರೇ ಇದೀಗ ನಿವೃತ್ತ ಅಧಿಕಾರಿಯ ನೇಮಕಕ್ಕೆ ಆದೇಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಅವರು ಕಳೆದ ಜೂನ್‌ನಲ್ಲಿ ನಿವೃತ್ತ ಹಿರಿಯ ಅಧಿಕಾರಿಗಳನ್ನು ವಜಾ ಮಾಡಲು ಆದೇಶ ನೀಡಿದ್ದರು. ಈ ಆದೇಶದ ಬಳಿಕ 360ಕ್ಕೂ ಹೆಚ್ಚು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು, ನಿವೃತ್ತ ಎಂಜಿನಿಯರ್ ಗಳು, ಲೆಕ್ಕಾಧಿಕಾರಿಗಳು ಸೇರಿ ಅನೇಕ ಹುದ್ದೆಯಲ್ಲಿನ ಅಧಿಕಾರಿ, ಸಿಬ್ಬಂದಿಯನ್ನು ಸರ್ಕಾರ ವಜಾ ಮಾಡಿತ್ತು.




