ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಅಭಾವದಿಂದ ಬರಗಾಲ ಆವರಿಸಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ನೆರವು ಕಲ್ಪಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಪಾದಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರೈತರಿಗೆ ಪರಿಹಾರ ಮೊತ್ತ ಬಿಡುಗಡೆಯಾಗಿದೆ. ಆದರೆ ಆ ಮೊತ್ತವನ್ನು ಬ್ಯಾಂಕುಗಳ ಸಾಲಕ್ಕೆ ಜಮೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ದೂರಿದ್ದಾರೆ.
ಸರ್ಕಾರದ ಈ ಸೂಚನೆಯ ಹಿನ್ನೆಲೆಯಲ್ಲಿ ವಿವಿಧ ಸಹಕಾರಿ ಬ್ಯಾಂಕುಗಳು ರೈತರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ಅವರ ಬಾಕಿ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ. ಇದರಿಂದ ರೈತರಿಗೆ ಯಾವುದೇ ರೀತಿಯ ನೆರವು ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವು ಕಲ್ಪಿಸಲು ಸರ್ಕಾರ ಈ ಕೂಡಲೇ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಸರ್ಕಾರ ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಹಾಗೂ ಬರಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದಿದ್ದಾರೆ.
ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದ ಬರಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳ ವರ್ತನೆ ನಿಜಕ್ಕೂ ಕ್ರೂರಾತಿಕೂರವಾಗಿದ್ದು, ಖಂಡನೀಯವಾಗಿದೆ ಎಂದಿದ್ದಾರೆ.
ಈಗಾಗಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದರೆ ತಪ್ಪಲ್ಲ ಎಂದು ಹೇಳಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆ ಎಂಬುದೇ ಇಲ್ಲದಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ದಾತನಾಗಿ ನಿಲ್ಲಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ ಎಂದಿದ್ದಾರೆ.



