ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
‘‘ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು BJP Karnataka ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ.
ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ.
ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ.
ಈ ಪ್ರಕರಣದಿಂದಾಗಿ ಪ್ರಧಾನಿ Narendra Modi ಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.
ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ Bharatiya Janata Party (BJP) ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ.
– ಸಿದ್ದರಾಮಯ್ಯ, ಸಿಎಂ




