ಬೆಂಗಳೂರು: ಗ್ರಾಮೀಣ ಪ್ರದೇಶಗಳ ಅಕ್ರಮ ನಿವೇಶನ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಕ್ರಮ ನಿವೇಶನ ಹಾಗೂ ಕಟ್ಟಡಗಳಿಗೆ ಇ-ಖಾತಾ ನೀಡಲು ತೀರ್ಮಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗ್ರಾಮ ಪಂಚಾಯಿತಿಗಳನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ, 2025 ಅನ್ನು ಪ್ರಸಕ್ತ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿದ್ದು ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ 2013 ಜೂ.14ರ ಮೊದಲು ಹಾಗೂ ನಂತರ ನೋಂದಣಿಯಾದ ಎಲ್ಲಾ ನಿವೇಶನ, ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ಖಾತೆ ನೀಡಲಾಗುತ್ತದೆ. ಅಂದರೆ 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲು ಈ ಕಾಯ್ದೆ ಮೂಲಕ ಅವಕಾಶ ಕಲ್ಪಿಸಲಾಗುತ್ತದೆ.




