ಬೆಂಗಳೂರು: ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಅಧ್ಯಯನ ನಡೆಸಿ ಹೈಕಮಾಂಡ್ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶದ ಅನ್ವಯ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿ ನಿಯೋಗದ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ವೈಯಕ್ತಿಕವಾಗಿ ನಾನು ಒಳ ಮೀಸಲಾತಿಯ ಪರವಾಗಿದ್ದೇನೆ. ಆದರೆ ಈ ಬಗ್ಗೆ ಏಕಾಏಕಿ ತೀರ್ಮಾನ ತೆಗೆದುಕೊಳ್ಳಲು ಬರುವುದಿಲ್ಲ ಎಂದರು.
ಈ ವಿಷಯವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅಧ್ಯಯನ ನಡೆಸಬೇಕಾಗಿದೆ. ಹೀಗಾಗಿ ಇದನ್ನು ಕಾನೂನು ತಜ್ಞರ ಅಭಿಪ್ರಾಯಕ್ಕೆ ಕಳುಹಿಸುತ್ತಿದ್ದೇನೆ. ಆನಂತರ ಹೈಕಮಾಂಡ್ ಜೊತೆಗೂ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ಹಲವು ದಿನಗಳಿಂದಲೂ ವಾದ-ವಿವಾದಗಳು ತೀವ್ರಗೊಂಡಿವೆ. ಈ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿ ಚರ್ಚೆ ನಡೆಸಿ ವರದಿ ನೀಡಿತ್ತು. ಆದರೆ ಅದು ಅವೈಜ್ಞಾನಿಕ ಎಂಬ ಕಾರಣಕ್ಕೆ ಪ.ಜಾತಿಯಲ್ಲಿರುವ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು.
ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿರ್ಧಾರವನ್ನು ಕೈಗೊಂಡು ಅದಕ್ಕೆ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ ಇದೀಗ ರಾಜ್ಯ ಸರ್ಕಾರಗಳೇ ನೇರವಾಗಿ ಇಂತಹ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ತೀರ್ಪಿನ ನ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲು ಮುಂದಾಗಿದ್ದಾರೆ.
ಸಚಿವ ಮುನಿಯಪ್ಪ ನೇತೃತ್ವದ ನಿಯೋಗದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮಾಪುರ್, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆಯ ಮಾಜಿ ಉಪಸಭಾಪತಿ ಡಾ.ಎಲ್.ಹನುಮಂತಯ್ಯ, ಶಾಸಕರಾದ ಶ್ರೀನಿವಾಸ್, ಬಸವಂತಪ್ಪ, ಡಾ.ತಿಮಯ್ಯ, ಮಾಜಿ ಸಂಸದ ಶಿವಣ್ಣ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.




